ಬೆಂಗಳೂರು : ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿರುವ ಬಿಜೆಪಿ ರೈತರ ಸಾಲಮನ್ನಾ, ಉತ್ತರ ಕರ್ನಾಟಕದ ನಿರ್ಲಕ್ಷ್ಯ ವಿಚಾರಗಳು ಬಿಜೆಪಿಗೆ ವರದಾನವಾಗಿ ಪರಿಣಮಿಸಿದೆ. ಈ ವಿಷಯವನ್ನು ಇಟ್ಟುಕೊಂಡು ರಾಜ್ಯದ್ಯಾಂತ ಬಿಜೆಪಿ ಹೋರಾಟಕ್ಕೆ ಸಿದ್ದವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನ ಗೆಲ್ಲಲು ಇದು ಆಸರೆಯಾಗಲಿದೆ ಎಂಬ ಭರವಸೆಯನ್ನು ಕಮಲಪಾಳಯದ ನಾಯಕರು ಹೊಂದಿದ್ದಾರೆ.
ಈ ಎಲ್ಲಾ ವಿಷಯಗಳ ಕುರಿತು ಚರ್ಚೆ ನಡೆಸಲು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿಸಭೆ ನಡೆಸಿರುವ ನಾಯಕರು ಪಕ್ಷ ಸಂಘಟನೆ ಕುರಿತು ಹೆಚ್ಚಿನ ಒತ್ತು ನೀಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಜಿಂದಾಲ್ನಲ್ಲಿ ಐದು ದಿನಗಳ ಪ್ರಾಕೃತಿಕ ಚಿಕಿತ್ಸೆಗೆ ದಾಖಲಾಗಿರುವ ಯಡಿಯೂರಪ್ಪ ಸಭೆಗೆ ಆಗಮಿಸಿದ್ದು , ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್. ಅಶೋಕ್, ಸಿ.ಎಂ.ಉದಾಸಿ, ನಳೀನ್ ಕುಮಾರ್ ಕಟೀಲ್ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿಯಾಗಿದ್ದಾರೆ.
ಲೋಕಸಭಾ ಚುನಾವಣೆ ತಯಾರಿಗಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಪಕ್ಷ ಬಲವರ್ಧನೆಗೆ ಸಜ್ಜಾಗುವಂತೆ ಸೂಚನೆ ನೀಡಲಾಗಿದೆ. ಮೈತ್ರಿ ಸರ್ಕಾರದಲ್ಲಿ ಅಸಮಾಧಾನಿತ ಕಾಂಗ್ರೆಸ್ -ಜೆಡಿಎಸ್ ನಾಯಕರನ್ನು ಸೆಳೆಯುವ ಕುರಿತು ಚರ್ಚೆ ನಡೆಸಿದ್ದು, ಮೈತ್ರಿ ಸರ್ಕಾರದ ವಿರುದ್ಧ ಹೊರಾಟದ ರೂಪುರೇಷೆ ಕುರಿತು ಚರ್ಚೆ ನಡೆಸಿದೆ.
ರೈತರ ಸಂಪೂರ್ಣ ಸಾಲ ಮನ್ನಾ ಆಗ್ರಹಿಸಿ ರಾಜ್ಯ ಪ್ರವಾಸ, ರಾಜ್ಯಾದ್ಯಂತ ಹೋರಾಟಕ್ಕೆ ತಯಾರಿ ನಡೆಸಿದ್ದು, ಇದರ ಸಾರಥ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೊರಲು ಮುಖಂಡರು ಸಮ್ಮತಿ ಸೂಚಿಸಿದ್ದಾರೆ.
ಲೋಕಸಭಾ ಚುನಾವಣೆಗೆ ರೈತರ ಸಂಪೂರ್ಣ ಸಾಲ ಮನ್ನಾ ವಿಚಾರವನ್ನು ಅಸ್ತ್ರವಾಗಿ ಬಳಸಿಕೊಂಡು ರೈತರ ಪರವಾಗಿ ಹೋರಾಟದ ಮೂಲಕ ರೈತ ಸಮೂದಾಯ ಸೆಳೆಯಲು ಯೋಜನೆ ರೂಪಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…