Featured

ಸಮ್ಮಿಶ್ರ ಸರಕಾರವನ್ನು ನಾವು ಬೀಳಿಸುವುದಿಲ್ಲ, ಅದಾಗಿಯೇ ಬೀಳಲಿದೆ: ಯಡಿಯೂರಪ್ಪ

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೇರಿಕೊಂಡು ಸರಕಾರವನ್ನು ರಚನೆ ಮಾಡಿದ್ದು, ಸದ್ಯ ಈ ಎರಡು ಪಕ್ಷಗಳ ಪ್ರಮುಖರ ನಡುವೆ ಅಸಮಧಾನ ಹೊಗೆಯಾಡುತ್ತಿದೆ. ಇದೀಗ ಈ ಕುರಿತಾದಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಮ್ಮಿಶ್ರ ಸರಕಾರದಲ್ಲಿ ಅಸಮಧಾನಗಳು ಕಂಡುಬರುತ್ತಿವೆ. ಸಮ್ಮಿಶ್ರ ಸರಕಾರವನ್ನು ನಾವೇನೂ ಬೀಳಿಸಲು ಹೋಗುವುದಿಲ್ಲ. ಸರಕಾರವೇ ತನ್ನಿಂತಾನೇ ಬೀಳಲಿದೆ ಎಂದು ಭವಿಷ್ಯ ನುಡಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಭೇಟಿ ಬೆನ್ನಲ್ಲೇ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಪಕ್ಷದ ಪ್ರಮುಖ ನಾಯಕರ ಜತೆ ಮಂಗಳವಾರ ಇಡೀ ದಿನ ಸುದೀರ್ಘ‌ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು. ಬಿಎಸ್‌ವೈ ಭೇಟಿ ಮಾಡಿದ ಮಾಜಿ ಸಚಿವ, ಶಾಸಕ ಉಮೇಶ್‌ ಕತ್ತಿ ಅವರು, ಸರ್ಕಾರ ರಚನೆಗೆ ಅವಕಾಶ ಸಿಕ್ಕರೆ ಸುಮ್ಮನೆ ಕೂರುವುದಿಲ್ಲವೆಂಬ “ಬಾಂಬ್‌’ ಅನ್ನೂ ಸಿಡಿಸಿದರು. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಗೆ ನಾನೂ ಸೇರಿದಂತೆ ಬಸವರಾಜ ಬೊಮ್ಮಾಯಿ, ಮುರುಗೇಶ್‌ ನಿರಾಣಿ ಎಲ್ಲರೂ ಸಿದ್ಧರಿದ್ದೇವೆ ಎಂದೂ ಹೇಳಿರು ವುದು ಬಿಜೆಪಿ ಮತ್ತೂಮ್ಮೆ ಸರ್ಕಾರ ರಚನೆ ಅವಕಾಶಕ್ಕಾಗಿ ಕಾಯುತ್ತಿರುವ ಮುನ್ಸೂಚನೆ ನೀಡಿದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

14 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago