ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಣ್ಣೀರು ಹಾಕಿರುವುದು ನಾಚಿಕೆಗೇಡಿನ ಸಂಗತಿ. ಒಬ್ಬ ಮುಖ್ಯಮಂತ್ರಿ ಹೆಂಗಸರ ರೀತಿಯಲ್ಲಿ ಅತ್ತರೆ ಹೇಗೆ’ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಮಾಡುತ್ತಿಲ್ಲ.
ಹೀಗಾಗಿ ಈ ಸಮ್ಮಿಶ್ರ ಸರ್ಕಾರಕ್ಕೆ ಆಯಸ್ಸು ಕಡಿಮೆ ಎಂದೂ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಭಾನುವಾರ ನಗರದ ಸದಾಶಿವ ನಗರದಲ್ಲಿರುವ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಜೆಡಿಎಸ್ ಹಾಗೂ ಮುಖ್ಯ ಮಂತ್ರಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು. ಚುನಾವಣೆ ವೇಳೆ ಮತಕ್ಕಾಗಿ ಅಳುವುದನ್ನು ನೋಡಿದ್ದೇವೆ. ಆದರೆ, ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಳುವುದರಲ್ಲಿ ಅರ್ಥವಿಲ್ಲ. ಮುಖ್ಯ ಮಂತ್ರಿಯಾಗಿ ಹೆಣ್ಣು ಮಕ್ಕಳ ರೀತಿಯಲ್ಲಿ ಅಳುತ್ತಾ ಕುಳಿತರೆ ಹೇಗೆ? ಇದು ರಾಜ್ಯಕ್ಕೆ ಮಾಡಿದ ಅವಮಾನ. ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.
ಸರ್ಕಾರದ ಆಯಸ್ಸುಕಡಿಮೆ: ಸಮ್ಮಿಶ್ರ ಸರ್ಕಾರದಲ್ಲಿ ಎರಡೂ ಪಕ್ಷಗಳು ಮೈತ್ರಿ ಧರ್ಮವನ್ನು ಪಾಲಿಸಿದರೆ ಒಳ್ಳೆಯದು. ಆದರೆ ಅದು ಆಗುತ್ತಿಲ್ಲ. ಜೆಡಿಎಸ್ ಪಕ್ಷವೊಂದೇ ಮೇಲುಗೈ ಸಾಧಿಸಲು ಯತ್ನಿಸುತ್ತಿದೆ. ಒಬ್ಬರ ಖಾತೆಯಲ್ಲಿ ಮತ್ತೊಬ್ಬರು ಹಸ್ತಕ್ಷೇಪ ಮಾಡುತ್ತಾರೆ ಎಂದು ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಸಿಎಂ ಕುಮಾರಸ್ವಾಮಿ ಅಧಿಕಾರ ನಡೆಸದೆ ಅಳುತ್ತಾರೆ. ಅದು ಸಂಸತ್ತಿನಲ್ಲಿ ಚರ್ಚೆ ಆಗುತ್ತದೆ. ಜೆಡಿಎಸ್ ವೈಖರಿ ಕಾಂಗ್ರೆಸ್ ಘನತೆಗೆ ಚ್ಯುತಿ ಬರುವ ರೀತಿ ಇದೆ. ಹೀಗಾಗಿ ಸರ್ಕಾರದ ಆಯಸ್ಸು ಕಡಿಮೆ ಎಂದು ಕೆ.ಎನ್. ರಾಜಣ್ಣ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…