Featured

ಸಮ್ಮಿಶ್ರ ಸರ್ಕಾರದಲ್ಲಿ ಕಿತ್ತಾಟ ; ಶಾಸಕಿ ಲಕ್ಷ್ಮೀ ಹೆಬ್ಬಾಳ್‍ಕರ್ ವಿರುದ್ಧ ಸಚಿವ ಜಾರಕಿಹೊಳಿ ಗರಂ ; ದೋಸ್ತಿ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರನ್ನು ಹದ್ದು ಬಸ್ತಿನಲ್ಲಿ ಇಡದಿದ್ದರೇ, ನಾನು ಹಾಗೂ ಸತೀಶ್ ಜಾರಕಿಹೊಳಿ ಸೇರಿಕೊಂಡು ಉಗ್ರ ಕ್ರಮ ಕೈಗೊಳ್ಳುತ್ತೇವೆ ಎಂದು ಪೌರಾಡಳಿತ ಹಾಗೂ ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಖಾರವಾಗಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 2004 ರಿಂದ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯಕ್ಕೆ ಬಂದಿದ್ದಾರೆ. ಮೊದಲು ಅವರೇನಾಗಿದ್ದರು, ಅವರ ಇತಿಹಾಸ ಏನು ಎಂಬುದನ್ನು ಮೊದಲು ಅರಿತುಕೊಳ್ಳಲಿ. ಹೆಬ್ಬಾಳ್ಕರ್ ರವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ಮಾಡಿದ್ದು ಸತೀಶ್ ಜಾರಕಿಹೊಳಿ. ನಾವು ಸಹಾಯ ಮಾಡಿದ್ದನ್ನು ಯಾರಿಗೂ ಹೇಳಬಾರದು ಎಂದು ಅಂದುಕೊಂಡಿದ್ದೆವು. ಆದರೆ ಈಗ ಅನಿವಾರ್ಯವಾಗಿ ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಬ್ಬಾಳ್ಕರ್ ತಂದೆಯು ಅನಾರೋಗ್ಯಕ್ಕೆ ತುತ್ತಾದಾಗ ನಾನೇ ಧನ ಸಹಾಯ ಮಾಡಿದ್ದೆ, ಅವರ ಮಗ ಹಾಗೂ ಸಹೋದರನ ವಿಷಯದಲ್ಲೂ ಸಹಾಯ ಮಾಡಿದ್ದೆ. ಆದರೆ ಇಂದು ಅವರು ಕೀಳು ಮಟ್ಟಕ್ಕೆ ಇಳಿದು ಪ್ರಚಾರ ಮಾಡುತ್ತಿದ್ದಾರೆ. ಜಾರಕಿಹೊಳಿ ಕುಟುಂಬದ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಇನ್ನು ಮುಂದೆ ಹೆಬ್ಬಾಳ್ಕರ್ ಬಗ್ಗೆ ನಾವು ಮಾತನಾಡಲ್ಲ. ಹೆಬ್ಬಾಳ್ಕರ್ ನಮಗೆ ಸಾಲ ಕೊಟ್ಟಿದ್ದಾರೆ ಎಂಬುದು ಕೇವಲ ಊಹಾಪೋಹ. ಅವರಿಗೆ ದೆಹಲಿ ತೋರಿಸಿದ್ದು ನಾನು. ಡಿಕೆಶಿ ನಾವು ಇಬ್ಬರು ಗೆಳೆಯರು, 2004 ರಲ್ಲಿ ನಾವು ಡಿಕೆಶಿ ಪರ ಬ್ಯಾಟಿಂಗ್ ಮಾಡಿದ್ದೆವು. ಅವರೂ ಸಹ ನನಗೆ ಸಚಿವರಾಗಲು ಸಹಾಯ ಮಾಡಿದ್ದರು. ಕೊಲ್ಹಾಪುರದ ಮಹಾಲಕ್ಷ್ಮೀ ದೇವರ ಆಣೆ ಮಾಡಲೂ ಸಹ ನಾನು ಸಿದ್ದ. ಇನ್ನುಮುಂದೆ ಲಕ್ಷ್ಮೀ ಹೆಬ್ಬಾಳ್ಕರನ್ನು ಹದ್ದುಬಸ್ತಿನಲ್ಲಿ ಇಡದಿದ್ದರೇ, ನಾನು ಹಾಗೂ ಸತೀಶ್ ಜಾರಕಿಹೊಳಿ ಉಗ್ರ ನಿರ್ಧಾರ ಕೈಗೊಳ್ಳುತ್ತೇವೆ. ನಾವು ಬಹುಮತ ಮಾಡೋದು ದೊಡ್ಡದಲ್ಲ. ಆದರೆ ಏನಾದರೂ ಮಾಡಿದರೆ ಜಾರಕಿಹೊಳಿ ಕುಟುಂಬಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಳಿದರು.

ಚುನಾವಣಾ ವಿಚಾರದಲ್ಲಿ ಹಣಕಾಸಿನ ವ್ಯವಹಾರ ನಡೆದಿದೆ. ಸತೀಶ್ ಜಾರಕಿಹೊಳಿ ಅಪಮಾನ ಆದರೆ, ನಾನು ಅವರ ಜೊತೆಗೆ ಇರುತ್ತೇನೆ. ಅವರ ನಿರ್ಣಯಕ್ಕೆ ನಾನೂ ಬದ್ಧ.  ಎಂದು ತಿಳಿಸಿದರು.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

6 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 hour ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 hour ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago