ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ರೈತರ ಬೆಳೆಸಾಲ ಮನ್ನಾ ಯೋಜನೆಯಡಿ ಜನವರಿ 28 ರ ವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಒಟ್ಟು 2.9 ಲಕ್ಷ ಸಾಲ ಖಾತೆಗಳಿಗೆ 1440 ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆ.
ಜನವರಿ 28ರ ವರೆಗೆ ಸಹಕಾರಿ ಬ್ಯಾಂಕುಗಳ 1.4 ಲಕ್ಷ ಸಾಲಖಾತೆಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
768 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 150125 ಸಾಲಖಾತೆಗಳಿಗೆ 672.5 ಕೋಟಿ ರೂ. ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಲಾಗಿದೆ.
ಈ ಹಿಂದೆ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರವು ನಾಲ್ಕು ಹಂತಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದರು. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಸಿಎಂ ಸಾಲಮನ್ನಾ ಯೋಜನೆಗೆ ಅಗತ್ಯವಾದ ಸಂಪೂರ್ಣ ಹಣವನ್ನು ಈ ಸಲದ ಬಜೆಟ್‌ನಲ್ಲೇ ನಿಗದಿಮಾಡುವುದಾಗಿ ಭರವಸೆ ನೀಡಿದ್ದರು. ಈ ಮೂಲಕ ಒಂದೇ ಹಂತದಲ್ಲಿ ಸಾಲಮನ್ನಾ ಯೋಜನೆಯನ್ನು ಅನುಷ್ಠಾನಕ್ಕೆ ತರುವುದಾಗಿ ಅವರು ತಿಳಿಸಿದ್ದರು.
ಒಂದೇ ಕಂತಿನಲ್ಲಿ ರೈತರ ಸಾಲ ಮನ್ನಾ ಮಾಡುವುದರಿಂದ ಮಧ್ಯವರ್ತಿಗಳ ಹಾವಳಿ ಕೂಡ ತಪ್ಪಲಿದೆ. ಈ ಯೋಜನೆಯ ಸಂಪೂರ್ಣ ಫಲಾನುಭಾವಿಗಳು ರೈತರೇ ಆಗಬೇಕೆಂದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ರೈತರ ಖಾತೆಗೆ ನೇರವಾಗಿ ಜಮೆ ಆಗುವಂತಹ ವ್ಯವಸ್ಥೆಯನ್ನು ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಹೀಗಾಗಿ ಸಾಲ ಮನ್ನಾ ಯೋಜನೆ ನಿಧಾನಗೊಳ್ಳಲು ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…