Featured

ಸಮ್ಮಿಶ್ರ ಸರ್ಕಾರದ ಬಗ್ಗೆ ಸಮಾಧಾನವಿಲ್ಲ : ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸಚಿವರು ಸೇರಿದಂತೆ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ಬಗ್ಗೆ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ವಿವಿಧ ಮುಖಂಡರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರ ಕೆಲಸಗಳು ಆಗುತ್ತಿಲ್ಲ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಯಾರೊಬ್ಬರು ಶಾಸಕರ ಸಮಸ್ಯೆಗಳು ಹಾಗೂ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ.

ಶಾಸಕರೆಲ್ಲರೂ ಸರ್ಕಾರ ತಮ್ಮನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ನನ್ನ ಬಳಿ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿ ಮುಂದುವರೆದರೆ ಏನೂ ಮಾಡಲಾಗದ ಪರಿಸ್ಥಿತಿ ಉಂಟಾಗಬಹುದು ಎಂದು ಎಚ್ಚರಿಸಿದರು ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ ವೇಣು, ಸರ್ಕಾರದಿಂದ ಕಾಂಗ್ರೆಸ್ ಶಾಸಕರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗುವುದು. ಈ ಬಗ್ಗೆ ದೆಹಲಿಗೆ ಬಂದು ರಾಹುಲ್ ಗಾಂಧಿ ಜತೆ ಚರ್ಚಿಸಲು ಅವಕಾಶ ಮಾಡಿಕೊಡಲಾಗುವುದು.

ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಸಿದ್ದರಾಮಯ್ಯ ಅವರು ಶಾಸಕರನ್ನು ಪಕ್ಷ ಬಿಟ್ಟು ಹೋಗದಂತೆ ಮನವೊಲಿಸುವುದಾಗಿ ಒಪ್ಪಿದರೆಂದು ಮೂಲಗಳು ಹೇಳಿವೆ.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

3 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

6 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

7 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

7 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

8 hours ago