ಮಂಗಳೂರು: ಸುರತ್ಕಲ್ನ ಎನ್ಐಟಿಕೆ ಟೋಲ್ ಗೇಟ್ ರದ್ದಾಗಿರುವ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಟೋಲ್ ಗೇಟ್ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ‘ಟೋಲ್ ಗೇಟ್ ರದ್ದು ಮಾಡುವ ಸರ್ಕಾರದ ಆದೇಶ ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ. ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೆ ಧರಣಿ ಮುಂದುವರಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.
ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಬಂಟ್ವಾಳ: ಸಿಡಿಲು ಬಡಿದು ಬಾಲಕ ಸಾವು – Vishwanews24
ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್ ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ಧ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈ ಸಂದರ್ಭ ಕನಿಷ್ಠ ವಿಷಾಧವನ್ನಾದರು ವ್ಯಕ್ತಪಡಿಸಿ ಕ್ಷೆಮೆ ಕೇಳಬೇಕೆಂದು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…