ಬೆಂಗಳೂರು: ಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಗಳಲ್ಲಿ ಐಡಿ ಕಾರ್ಡ್‌ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಇಂತಹ ಅನಿಶ್ಚಿತತೆಯನ್ನು ತಪ್ಪಿಸುವ ಸಲುವಾಗಿ ಹಾಗೂ ಕೆಲಸ, ಕಾರ್ಯಗಳ ನಿಮಿತ್ತ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ಅಧಿಕಾರಿಗಳು ಮತ್ತು ನೌಕರರನ್ನು ಗುರುತಿಸಲು ಅನುಕೂಲವಾಗುವಂತೆ ಗುರುತಿನ ಚೀಟಿಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ರವೀಂದ್ರ ಆದೇಶಿಸಿದ್ದಾರೆ.
ಆದ್ದರಿಂದ, ಇನ್ನು ಮುಂದೆ ಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಯ ಅವಧಿಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ನೀಡಲಾದ ಹೆಸರು, ಪದನಾಮ ಹಾಗೂ ಇಲಾಖೆಯ ವಿವರಗಳುಳ್ಳ ಐಡಿ ಕಾರ್ಡ್ ಅನ್ನು ತಪ್ಪದೇ ಧರಿಸಬೇಕು. ಒಂದು ವೇಳೆ ಗುರುತಿನ ಚೀಟಿಯನ್ನು ಧರಿಸದೇ ಇರುವ ಬಗ್ಗೆ ಸಾರ್ವಜನಿಕರು ಹಾಗೂ ಇತರೆ ಕಡೆಯಿಂದ ದೂರುಗಳು ಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಚೇರಿಯ ಮೇಲಧಿಕಾರಿಗಳು ಶಿಸ್ತು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…