Featured

ಸರಕಾರಿ ಕಚೇರಿಗಳಿಂದಲೇ ರಾಜ್ಯದಲ್ಲಿ ಹೆಚ್ಚಿನ ವಿದ್ಯುತ್ ಬಿಲ್ ಬಾಕಿ : ಸಚಿವ ಸುನಿಲ್ ಕುಮಾರ್ -Vishwanews24

ಸರಕಾರಿ ಕಚೇರಿಗಳಿಂದಲೇ ರಾಜ್ಯದಲ್ಲಿ ಹೆಚ್ಚಿನ ವಿದ್ಯುತ್ ಬಿಲ್ ಬಾಕಿ : ಸಚಿವ ಸುನಿಲ್ ಕುಮಾರ್ -Vishwanews24

ಬೆಂಗಳೂರು : ಸರಕಾರಿ ಕಚೇರಿಗಳಿಂದಲೇ ರಾಜ್ಯದಲ್ಲಿ ಹೆಚ್ಚಿನ ವಿದ್ಯುತ್ ಬಿಲ್ ಬಾಕಿಯಾಗಿದೆ. ಇದರಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ವಿದ್ಯುತ್ ಬಿಲ್ ಬಾಕಿಯಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿರುವುದರಿಂದ ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವುದು ಎಲ್ಲರಿಗೂ ಅನ್ವಯವಾಗಲಿದೆ ಎಂದರು. ಈ ವೇಳೆ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ನೀಡುವ ಬೆಳಕು ಯೋಜನೆ ಅಡಿಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಯೋಚಿಸಲಾಗಿದೆ ಅದಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ಎನ್ ಒ ಸಿ ಅಗತ್ಯವಿಲ್ಲ. ರಾಜ್ಯದ ಎಲ್ಲ ಡಿವಿಜನಲ್ ಗಳಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಮಾಡಲು ತೀರ್ಮಾನಿಸಲಾಗಿದ್ದು. ಟಿಸಿ ಸುಟ್ಟರೆ 24 ಗಂಟೆಯಲ್ಲಿ ದುರಸ್ತಿ ಮಾಡಲಾಗುವುದು, ಗಂಗಾ ಕಲ್ಯಾಣದ ಯೋಜನೆಗಳಿಗೆ 30 ದಿನದಲ್ಲಿ ಸಂಪರ್ಕ ನೀಡಲು ಸೂಚಿಸಲಾಗಿದೆ, ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಡ್ ಮೀಟರ್ ಅಳವಡಿಕೆಗೆ ತೀರ್ಮಾನಿಸಲಾಗಿದೆ ಎಂದರು.

ಇದರೊಂದಿಗೆ ಉತ್ತರ ಕರ್ನಾಕಟದ ಜಿಲ್ಲೆಗಳಲ್ಲಿ 7 ಗಂಟೆ ನಿರಂತರ ವಿದ್ಯುತ್ ನೀಡಲು ತೀರ್ಮಾನಿಸಿದೆ. ಅದಕ್ಕಾಗಿ 60 ಕ್ಕೂ ಹೆಚ್ಚು ಸಬ್ ಸ್ಟೇಶನ್ ಮಾಡಲು ತೀರ್ಮಾನ ಮಾಡಲಾಗುವುದು ಎಂದ ಅವರು, ಈಗಾಗಲೇ ರಾಜ್ಯದಲ್ಲಿ ಹೊಸ ನೇಮಕಾತಿಗಳ ಬಗ್ಗೆ ಸಾಕಷ್ಟು ಬೇಡಿಕೆ ದೂರು ಬಂದಿದ್ದು ಲೈನ್ ಮೆನ್, ಜೆಇ ನೇಮಕದ ಬಗ್ಗೆ ಬೇಡಿಕೆ ಇದೆ. ವರ್ಗಾವಣೆ ದಂಧೆಯನ್ನು ವರ್ಷ ಪೂರ್ತಿ ನಡೆಸುವುದನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

3 days ago