Featured

ಸರಕಾರಿ ಪ್ರಥಮ ದರ್ಜೆ ಕಾಲೇಜು ನೂತನವಾಗಿ ಆರಂಭಿಸಿರುವ ಬಿಬಿಎ(ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್) ಕೋರ್ಸು ಉದ್ಘಾಟನೆ.vishwanews24

ಕಾಪು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು 2020-21ನೇ ಶೈಕ್ಷಣಿಕ ಸಾಲಿನಿಂದ ನೂತನವಾಗಿ ಆರಂಭಿಸಿರುವ ಬಿಬಿಎ(ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್) ಕೋರ್ಸು ಮತ್ತು ಕರ್ನಾಟಕ ಬ್ಯಾಂಕ್ ಕೇಂದ್ರ ಕಚೇರಿಯಿಂದ ಕೊಡಮಾಡಿದ ಸಿ.ಸಿಟಿವಿಯ ಉದ್ಘಾಟನ ಕಾರ್ಯಕ್ರಮ ಸೋಮವಾರ ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪುವಿನ ಶಾಸಕ ಲಾಲಾಜಿ‌ ಆರ್ ಮೆಂಡನ್ ನೆರವೇರಿಸಿ ಮಾತನಾಡಿ” ಕಾಲೇಜು ಜೀವನ ಕೇಲವ ಮೋಜು ಆಗದೆ ಜೀವನದ ಗುರಿ ಮುಟ್ಟುವ ಮೆಟ್ಟಿಲಾಗಬೇಕು,ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡ ಶಿಕ್ಷಣದಲ್ಲಿ ಹಿಂದೆ ಬೀಳಬಾರದೆಂಬ ಹಿತದೃಷ್ಟಿಯಿಂದ ಸರ್ಕಾರಕ್ಕೆ ಒತ್ತಡ ಹಾಕುವ ಮುಖಾಂತರ ಕಾಪು ಸರಕಾರಿ ಕಾಲೇಜಿಗೆ ಹೊಸಹೊಸ ಕೋರ್ಸು ಮತ್ತು ಅದಕ್ಕೆ ಬೇಕಾಗುವ ಕಟ್ಟಡ ಇತರ ವ್ಯವಸ್ಥೆ ತರುವ ಪ್ರಯತ್ನ ಮಾಡುತ್ತೇವೆ ಆದರೇ ಅದರ ಸದುಪಯೋಗಿಸಿಕೊಳ್ಳುವ ಪ್ರಯತ್ನ ವಿದ್ಯಾರ್ಥಿಗಳು ಮಾಡಬೇಕು ಎಂದರು.
ವಿದ್ರಾರ್ಥಿಗಳಿಗೆ ಉಪನ್ಯಾಸಕರ ಕೊರತೆ ಆಗದ ರೀತಿಯಲ್ಲಿ ಶೈಕ್ಷಣಿಕ ಸೇವೆ ನೀಡುವ ಕೆಲಸ ಮಾಡುತ್ತೇವೆ ಆದರೇ ವಿದ್ಯಾರ್ಥಿಗಳು ಉತ್ತಮ‌ ಫಲಿತಾಂಶ ನೀಡುವ ಜವಬ್ದಾರಿ ಇರಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಗೋಪಾಲಕೃಷ್ಣ ಸಾಮಗ ಕರ್ನಾಟಕ ಬ್ಯಾಂಕ್ ನ ಉಡುಪಿ ,ಪುರಸಭಾ ಸದಸ್ಯ ಉಸ್ಮಾನ್,ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ,ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಚಂದ್ರ ಮಲ್ಲಾರ್,ಹರಿಣಾಕ್ಷಿ,ಸಂದೀಪ್ ಶೆಟ್ಟಿ,ಲಕ್ಷ್ಮಿಕಾಂತ್ ಕಾಪು, ಉಪಸ್ಥಿತರಿದ್ದರು.

ಉಪನ್ಯಾಸಕಿ ರಜನಿ ಬಿಬಿಎ ಕೋರ್ಸುನ ಬಗ್ಗೆ ಪ್ರಸ್ತಾಪಿಸಿ,ಪ್ರಾಂಶುಪಾಲ ಡಾ|ಪ್ರೋ.ಅನಿಲ್ ಕುಮಾರ್ ಸ್ವಾಗತಿಸಿದರು, ಪ್ರೋ.ಲತಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ,ಉಪನ್ಯಾಸಕಿ ಡಾ.ಸುಚಿತ್ರಾ ವಂದಿಸಿದರು.

ಬ್ಯೂರೋ ರಿಪೋರ್ಟ್
ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

14 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

14 hours ago