Featured

ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? : ಸಿದ್ದರಾಮಯ್ಯ -Vishwanews24

ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? : ಸಿದ್ದರಾಮಯ್ಯ -Vishwanews24

ಬೆಂಗಳೂರು, : ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣದ ನೆಪದಲ್ಲಿ ಸಾವಿರಾರು ಕೋಟಿಗೂ ಅಧಿಕ ಹಣ ಲೂಟಿ ಮಾಡಿದ್ದು, ಸರ್ಕಾರದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರವೆಂಬ ವೈರಸ್ ಗೆ ಲಸಿಕೆ ಎಲ್ಲಿದೆ ತರುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. ಮುಖ್ಯಮಂತ್ರಿ ಯಡಿಯೂರಪ್ಪನವರು ಇದಕ್ಕೆ ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ನಿರ್ವಹಣೆ, ಸ್ಥಿರಾಸ್ತಿ ಮತ್ತು ಚರಾಸ್ತಿಯ ಪರಿಶೀಲನೆಯ ಸಂದರ್ಭದಲ್ಲಿ ಉಪಸ್ಥಿತಿಯಿರಲು ದೇವಸ್ಥಾನ ಮಹಾಸಂಘಕ್ಕೂ ಅವಕಾಶ ನೀಡಬೇಕು : ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ಕರ್ನಾಟಕ ಆಗ್ರಹ -Vishwanews24

ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಬಿ.ಎಸ್. ಯಡಿಯೂರಪ್ಪ ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ?’ ಎಂದು ಕೇಳಿದರು.

ಇದನ್ನೂ ಓದಿ : ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಗೋ ಮಾಂಸ ರಫ್ತು ನಿಲ್ಲಿಸಿ : ಯು.ಟಿ. ಖಾದರ್ -Vishwanews24

ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ.ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ.

ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

ಇದನ್ನೂ ಓದಿ : ಉಡುಪಿ : ಮಾರ್ಚ್‌ 22 ರಿಂದ 28 ರವರೆಗೆ ಸುಮನಸಾ ಕೊಡವೂರು ನಾಟಕೋತ್ಸವ “ರಂಗಹಬ್ಬ-9″ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

16 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago