ಬೆಂಗಳೂರು: ಸರ್ಕಾರದಿಂದ ಹಂಚಿಕೆಯಾಗಿರುವ ಸೈಟ್‌ಗಳಲ್ಲಿ ಮನೆ ಕಟ್ಟದೇ ಖಾಲಿ ಬಿಟ್ಟರೆ ಅಂತಹವರಿಂದ ನಿವೇಶನಗಳನ್ನ ವಾಪಸ್ ಪಡೆಯಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
ತ್ಯಾಜ್ಯ ಮುಕ್ತ ಹಾಗೂ ಸುಂದರ ಬೆಂಗಳೂರನ್ನ ನಿರ್ಮಿಸುವ ಉದ್ದೇಶದಿಂದ, ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರೊದಿಗೆ ʻತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ.
ಇದನ್ನೂ ಓದಿ:
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಬಿಡಿಎ, ಬಿಬಿಎಂಪಿ ಸೈಟ್ ಇರಲಿ, ಮನೆ ಕಟ್ಟದೇ ಖಾಲಿ ಬಿಟ್ಟರೆ ಡಬಲ್ ಟ್ಯಾಕ್ಸ್ ಕಟ್ಟಬೇಕಾಗುತ್ತೆ. ಅಥವಾ ಮನೆ ಕಟ್ಟದೇ ಇದ್ರೆ ಖಾಲಿ ಸೈಟನ್ನ ವಾಪಸ್ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಖಾಲಿ ಸೈಟನ್ನ ವಾಪಸ್ ಪಡೆಯುವಂತಹ ಕೆಲಸ ಆಗುತ್ತೆ. ಸರ್ಕಾರ ಮನೆ ಕಟ್ಟಲಿ ಅಂತ ಸೈಟ್ ಕೊಟ್ಟಿರೋದು, ಕಸ ಹಾಕಲಿ ಅಂತ ಅಲ್ಲ. ಖಾಲಿ ಸೈಟ್ ಮಾಡಿಕೊಂಡು ಕಸ ಹಾಕಿದ್ರೆ ಸಹಿಸಲ್ಲ. ಸರ್ಕಾರದಿಂದ ಪಡೆದ ಸೈಟ್ ಖಾಲಿ ಬಿಟ್ಟರೆ ಅಥವಾ ಮನೆ ಕಟ್ಟದೇ ಇದ್ರೆ, ಅದನ್ನ ವಾಪಸ್ ಪಡೆಯುವ ಕೆಲಸ ಆಗುತ್ತೆ ಎಂದಿದ್ದಾರೆ.
ಇದನ್ನೂ ಓದಿ:
ಸರ್ಕಾರದಿಂದ ಹಂಚಿಕೆ ಆಗಿರುವ ಸೈಟ್‌ಗೆ ಈಗಿನ ಬೆಲೆ ಏನಿದೆ, ಆ ಹಣವನ್ನ ವಾಪಸ್ ಕೊಡ್ತೇವೆ. ಹಣ ಕೊಟ್ಟು ಸೈಟ್ ವಾಪಸ್ ಪಡೆಯುತ್ತೇವೆ. ಏಕೆಂದ್ರೆ ಕೆಲವರು ಸೈಟ್ ತೆಗೆದುಕೊಂಡು 20-30 ವರ್ಷಗಳಾದ್ರೂ ಮನೆ ಕಟ್ಟಿಲ್ಲ, ಹಾಗೇ ಖಾಲಿ ಬಿಟ್ಟಿದ್ದಾರೆ, ಕಸ ಸುರಿಯೋಕೆ ಇಟ್ಕೊಂಡಿದ್ದಾರೆ. ಆದ್ದರಿಂದ ಮನೆ ಕಟ್ಟದಿದ್ರೆ ಸೈಟ್‌ವಾಪಸ್ ಪಡೆಯೋದಾಗಿ ಎಚ್ಚರಿಕೆ ನೀಡಿದ್ದಾರೆ
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…