ಬಾಗಲಕೋಟೆ : ಬಿಜೆಪಿ ಹೈಕಮಾಂಡ್ ಮೂವರಿಗೆ ಡಿಸಿಎಂ ಪಟ್ಟ ನೀಡಿದಕ್ಕೆ ಈಗಾಗಲೇ ಪಕ್ಷದೊಳಗೆ ಅಸಮಾಧಾನ ವ್ಯಕ್ತವಾಗಿದ್ದು, ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಶೀಘ್ರದಲ್ಲಿ ಪತನವಾಗಲಿದೆ, ಬಿಜೆಪಿ ತಾನು ಮಾಡಿದ ತಪ್ಪಿಗೆ ತಕ್ಕ ಪಾಠ ಅನುಭವಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಅಮಿತ್ ಶಾಗೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲು ಇಷ್ಟವಿರಲಿಲ್ಲ, ಹೀಗಿದ್ದರು ಕಷ್ಟ ಪಟ್ಟು ಅಧಿಕಾರ ಪಡೆದುಕೊಂಡ ಬಿಎಸ್ ವೈ. ಇದರ ಬೆನ್ನಲ್ಲೇ ಮೂವರು ಸಚಿವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಿದ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದೆ ಎಂದರು.
ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ವೇಳೆಯಲ್ಲಿಯೂ ಹಲವು ಸಚಿವಾಕಾಂಕ್ಷಿಗಳಿಗೆ ಖಾತೆ ಕೈ ತಪ್ಪಿ ಹೋಗಿದ್ದು, ಹಲವರಲ್ಲಿ ಅಸಮಾಧಾನ ಮೂಡಿಸಿತ್ತು. ಅದಾದ ಬಳಿಕ ಈ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿದ್ದವರಿಗೆ ಸ್ಥಾನ ನೀಡದೆ ಕೈ ಕೊಟ್ಟಿದ್ದು, ಪಕ್ಷದೊಳಗೊಳಗೆ ಹಾಗೂ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ಎಡೆಮಾಡಿದೆ. ಹೀಗಾಗಿ ಖಂಡಿತ ಸದ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಸ್ಫೋಟವಾಗಲಿದೆ. ತಾನು ಮಾಡಿದ ತಪ್ಪಿಗೆ ತಕ್ಕ ಪಾಠ ಅನುಭವಿಸಲಿದೆ. ಈ ಎಲ್ಲಾ ಅಪರಾಧದಿಂದಲೇ ಸರ್ಕಾರ ಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…