ಬೆಂಗಳೂರು: ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಚಲೋಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ. ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ವಿಷಯ ತಿಳಿಸಿದರು.
ಜುಲೈ 15ರಂದು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ವಿಧಾನಸೌಧ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಪದಾಧಿಕಾರಿಗಳ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಪಕ್ಷದ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಸಭೆಯಲ್ಲಿ ಭಾಗಿಯಾಗಿ ಮಾರ್ಗದರ್ಶನ ನೀಡಿದ್ದಾರೆ ಎಂದರು. ಮಾಜಿ ಸಚಿವ ಮುರುಗೇಶ್ ನಿರಾಣಿ, ಮುಖ್ಯ ವಕ್ತಾರ ಅಶ್ವಥ್ ನಾರಾಯಣ್ ಸುದ್ದಿಗೋಷ್ಟಿಯಲ್ಲಿದ್ದರು.
ಪದಾಧಿಕಾರಿಗಳ ಸಭೆಯಲ್ಲಿ ವಾಲ್ಮೀಕಿ ಹಗರಣ ಬಗ್ಗೆ ಚರ್ಚೆಯಾಯ್ತು. ದಲಿತ ವಿರೋಧಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಬಿಜೆಪಿ ಸರ್ಕಾರ ಈ ವರ್ಗದ ಮೀಸಲಾತಿ ಹೆಚ್ಚು ಮಾಡಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ, ದಲಿತರ ಹೆಸರೇಳಿ ದಲಿತರ ಹೆಸರಲ್ಲಿ ಭ್ರಷ್ಟಾಚಾರ ಮಾಡಿದೆ. ಕ್ಯಾಪ್ಟನ್ ಆಗಿ ಸಿದ್ದರಾಮಯ್ಯ, ಇಡೀ ಸಚಿವ ಸಂಪುಟ ದಲಿತರ ಹಣ ನುಂಗಲು ತಯಾರಿ ಮಡಿಕೊಂಡಿರೋದು ವಿಷಾದನೀಯ ಎಂದು ಸುನೀಲ್ ಕುಮಾರ್ ತಿಳಿಸಿದರು.
ಸರ್ಕಾರದ ಯೋಜನೆ ಮೂಲಕ, ದಲಿತ ಸಮುದಾಯದ ಏಳಿಗೆ ಮಾಡಬೇಕಿತ್ತು. ದಲಿತರಿಗೆ ಮೀಸಲಿಟ್ಟ ಹಣವನ್ನ ಲೂಟಿ ಮಾಡಿದೆ ಅಂತ ಬಿಜೆಪಿ ಒತ್ತಿ ಹೇಳಲಿದೆ. ವಾಲ್ಮೀಕಿ ಹಗರಣ, ಕಾರ್ಮಿಕರ ಇಲಾಖೆ ಹಗರಣ, SCP-TSP ಹಗರಣ ಹಗರಣಗಳ ಸರಮಾಲೆಯ ಸರ್ಕಾರ ಇದಾಗಿದೆ. ಇದನ್ನು ವಿರೋಧಿಸಿ ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಚಲೋ ಕರೆ ನೀಡಲಾಗಿದೆ. ವಾಲ್ಮೀಕಿ ಸಮುದಾಯದ ದೊಡ್ಡ ಸಂಖ್ಯೆಯಲ್ಲಿ ಬರಲಿದೆ. ಸಿದ್ದರಾಮಯ್ಯ ಅವರ ನಿಲುವು ಖಂಡಿಸಿ ಮುತ್ತಿಗೆ ಹಾಕಲಿದೆ. ದಲಿತರ ಹಣ ಲೂಟಿ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ದಲಿತರ ಕ್ಷಮೆಯಾಚಿಸಬೇಕು ಎಂದು ಅವರು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…