Featured

ಸರ್ಕಾರದ ದಲಿತ ವಿರೋಧಿ ನೀತಿ  ಖಂಡಿಸಿ ಜು. 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಚಲೋಗೆ ಕರೆ  : ಸುನಿಲ್ ಕುಮಾರ್ – vishwanews24

ಸರ್ಕಾರದ ದಲಿತ ವಿರೋಧಿ ನೀತಿ  ಖಂಡಿಸಿ ಜು. 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಚಲೋಗೆ ಕರೆ  : ಸುನಿಲ್ ಕುಮಾರ್

ಬೆಂಗಳೂರು: ಸರ್ಕಾರದ ದಲಿತ ವಿರೋಧಿ ನೀತಿ  ಖಂಡಿಸಿ ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ  ಚಲೋಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ. ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ವಿಷಯ ತಿಳಿಸಿದರು.

ಜುಲೈ 15ರಂದು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ವಿಧಾನಸೌಧ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಪದಾಧಿಕಾರಿಗಳ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಪಕ್ಷದ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಸಭೆಯಲ್ಲಿ ಭಾಗಿಯಾಗಿ ಮಾರ್ಗದರ್ಶನ ನೀಡಿದ್ದಾರೆ ಎಂದರು. ಮಾಜಿ ಸಚಿವ ಮುರುಗೇಶ್ ನಿರಾಣಿ, ಮುಖ್ಯ ವಕ್ತಾರ ಅಶ್ವಥ್ ನಾರಾಯಣ್ ಸುದ್ದಿಗೋಷ್ಟಿಯಲ್ಲಿದ್ದರು.

ಪದಾಧಿಕಾರಿಗಳ ಸಭೆಯಲ್ಲಿ ವಾಲ್ಮೀಕಿ ಹಗರಣ ಬಗ್ಗೆ ಚರ್ಚೆಯಾಯ್ತು. ದಲಿತ ವಿರೋಧಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಬಿಜೆಪಿ ಸರ್ಕಾರ ಈ ವರ್ಗದ ಮೀಸಲಾತಿ ಹೆಚ್ಚು ಮಾಡಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ, ದಲಿತರ ಹೆಸರೇಳಿ ದಲಿತರ ಹೆಸರಲ್ಲಿ ಭ್ರಷ್ಟಾಚಾರ ಮಾಡಿದೆ. ಕ್ಯಾಪ್ಟನ್ ಆಗಿ ಸಿದ್ದರಾಮಯ್ಯ, ಇಡೀ ಸಚಿವ ಸಂಪುಟ ದಲಿತರ ಹಣ ನುಂಗಲು ತಯಾರಿ ಮಡಿಕೊಂಡಿರೋದು ವಿಷಾದನೀಯ ಎಂದು ಸುನೀಲ್‌ ಕುಮಾರ್‌ ತಿಳಿಸಿದರು.

ಸರ್ಕಾರದ ಯೋಜನೆ ಮೂಲಕ, ದಲಿತ ಸಮುದಾಯದ ಏಳಿಗೆ ಮಾಡಬೇಕಿತ್ತು. ದಲಿತರಿಗೆ ಮೀಸಲಿಟ್ಟ ಹಣವನ್ನ ಲೂಟಿ ಮಾಡಿದೆ ಅಂತ‌ ಬಿಜೆಪಿ ಒತ್ತಿ ಹೇಳಲಿದೆ. ವಾಲ್ಮೀಕಿ ಹಗರಣ, ಕಾರ್ಮಿಕರ ಇಲಾಖೆ ಹಗರಣ, SCP-TSP ಹಗರಣ ಹಗರಣಗಳ ಸರಮಾಲೆಯ ಸರ್ಕಾರ ಇದಾಗಿದೆ. ಇದನ್ನು ವಿರೋಧಿಸಿ ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಚಲೋ ಕರೆ ನೀಡಲಾಗಿದೆ. ವಾಲ್ಮೀಕಿ ಸಮುದಾಯದ ದೊಡ್ಡ ಸಂಖ್ಯೆಯಲ್ಲಿ ಬರಲಿದೆ. ಸಿದ್ದರಾಮಯ್ಯ ಅವರ ನಿಲುವು ಖಂಡಿಸಿ ಮುತ್ತಿಗೆ ಹಾಕಲಿದೆ. ದಲಿತರ ಹಣ ಲೂಟಿ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ದಲಿತರ ಕ್ಷಮೆಯಾಚಿಸಬೇಕು ಎಂದು ಅವರು ಹೇಳಿದರು.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

29 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

41 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

56 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

1 hour ago