ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಅಮಾಯಕರ ಸಾವಿನ ಬಗ್ಗೆ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಬೆದರಿ ಸರ್ಕಾರದ ವೈಫಲ್ಯ ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿರಿಯ ಪೋಲಿಸ್ ಅಧಿಕಾರಿಗಳನ್ನು ಅಮಾನತು ಮಾಡಿ ಬಲಿಪಶು ಮಾಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖುದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ರವರೇ ಈ ಅನಾಹುತಕ್ಕೆ ಪೊಲೀಸರು ಹೊಣೆಯಲ್ಲ ಎಂದು ಹೇಳಿಕೆ ನೀಡಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪಕ್ಷದ ಹೈಕಮಾಂಡ್ ಒತ್ತಡಕ್ಕೆ ಮಣಿದು ಸರ್ಕಾರದ ವರ್ಚಸ್ಸಿನ ಹಾನಿ ನಿಯಂತ್ರಿಸಲು ಈ ಕ್ರಮ ಕೈಗೊಂಡಿದೆ.
ಆರ್. ಸಿ. ಬಿ. ತಂಡದ ಐತಿಹಾಸಿಕ ಗೆಲುವಿನ ಸಾಧನೆಯನ್ನು ತಮ್ಮ ರಾಜಕೀಯ ಪ್ರತಿಷ್ಟೆಯ ಉದ್ದೇಶಕ್ಕಾಗಿ ಯಾವುದೇ ಪೂರ್ವ ತಯಾರಿ ಇಲ್ಲದೇ ಮಾಡಿದ ಪರಿಣಾಮದಿಂದ ಇಂದು 11 ಮಂದಿ ಅಮಾಯಕ ಯುವ ಜನತೆಯ ಹೃದಯವಿದ್ರಾವಕ ಸಾವಿಗೆ ರಾಜ್ಯ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು.
ಪೋಲಿಸರು ನೀಡಿದ ಅಪಾಯದ ಸೂಚನೆಯನ್ನು ಪರಿಗಣಿಸದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಿ ಉಂಟಾದ ದುರಂತಕ್ಕೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವುದು ಖಂಡನೀಯ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಮಾನಸಿಕ ಸ್ಥೈರ್ಯವನ್ನೇ ಕುಗ್ಗಿಸಲು ಮುಂದಾಗಿದೆ.
ಸರ್ಕಾರದ ಕೈಗೊಂಬೆಯಂತೆ ವರ್ತಿಸುವ ಪೋಲಿಸ್ ಇಲಾಖೆಗೂ ಸರ್ಕಾರದ ಈ ನಿರ್ಧಾರ ಎಚ್ಚರಿಕೆಯ ಕರೆಗಂಟೆಯಾಗಿದ್ದು, ಸರಕಾರದ ಸ್ವಯಂಕೃತ ಅಪರಾಧದಿಂದ ಸಮಸ್ಯೆ ಉಂಟಾದಾಗ ಪೊಲೀಸರನ್ನೇ ಬಲಿಪಶು ಮಾಡಲು ಸರ್ಕಾರ ಹಿಂಜರಿಯುವುದಿಲ್ಲ ಎಂಬುದು ಸಾಬೀತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…