ಸರ್ಕಾರವನ್ನು ಯಾರೇ ನಡೆಸಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತುರ್ತಾಗಿ ಸ್ಪಂದಿಸಬೇಕು ,ಸಂತ್ರಸ್ತರ ಪರವಾಗಿ ಮುಂದಿನ ದಿನಗಳಲ್ಲಿ ಧ್ವನಿ ಎತ್ತುತ್ತೇವೆ : ನಿಖಿಲ್ ಕುಮಾರಸ್ವಾಮಿ -Vishwanews24

ಮಡಿಕೇರಿ: ಸರ್ಕಾರವನ್ನು ಯಾರೇ ನಡೆಸಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತುರ್ತಾಗಿ ಸ್ಪಂದಿಸಬೇಕು ಸಂತ್ರಸ್ತರ ಪರವಾಗಿ ಮುಂದಿನ ದಿನಗಳಲ್ಲಿ ಧ್ವನಿ ಎತ್ತುತ್ತೇವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಕಾವೇರಿ ನದಿಯ ಪ್ರವಾಹಕ್ಕೆ ಸಿಲುಕಿದ ಕುಶಾಲನಗರದ ಕುವೆಂಪು, ಸಾಯಿ ಬಡಾವಣೆ, ತೆಪ್ಪದಕಂಡಿ, ನಂಜರಾಯಪಟ್ಟಣ, ನೆಲ್ಯಹುದಿಕೇರಿ, ಕುಂಬಾರಗುಂಡಿ ಹಾಗೂ ನೆಲ್ಯಹುದಿಕೇರಿ ಪ್ರದೇಶಗಳಿಗೆ ಭೇಟಿ ನೀಡಿ ನಿವಾಸಿಗಳ ಸಂಕಷ್ಟವನ್ನು ಆಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಇಲ್ಲಿಗೆ ರಾಜಕೀಯ ಮಾಡಲು ಬಂದಿಲ್ಲ. ಯಾರೇ ಸರ್ಕಾರವನ್ನು ನಡೆಸಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತುರ್ತಾಗಿ ಸ್ಪಂದಿಸಬೇಕು. ಆಡಳಿತದ ಸರ್ಕಾರ ಘೋಷಣೆ ಹಾಗೂ ಭರವಸೆಗಳು ಹಾಗೆಯೇ ಉಳಿದುಕೊಳ್ಳಬಾರದು. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳು ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.

ವಿಪರೀತ ಮಳೆ ಹಾಗೂ ಭೂಕುಸಿತದಿಂದ ಜಿಲ್ಲೆಯ ಜನತೆ ನಲುಗಿದ್ದಾರೆ. ಇಲ್ಲಿನ ಜನರು ಶಾಶ್ವತವಾದ ಪರಿಹಾರವನ್ನು ಕೇಳುತ್ತಿದ್ದಾರೆ. ಇಲ್ಲಿನ ಜನರು ಹಣಕ್ಕೆ ಆಸೆ ಪಡುತ್ತಿಲ್ಲ. ತಾತ್ಕಾಲಿಕ ಪರಿಹಾರವನ್ನು ಯಾರೂ ನಿರಿಕ್ಷಿಸುತ್ತಿಲ್ಲ. 2018 ರ ಸಮ್ಮಿಶ್ರ ಸರ್ಕಾರದಲ್ಲಿ 9.85 ಲಕ್ಷ ವೆಚ್ಚದಲ್ಲಿ ನಿರಾಶ್ರಿತರಿಗೆ ಒಂದು ಸಾವಿರ ಮನೆಗಳನ್ನು ಕಟ್ಟಿಕೊಡಲಾಗಿತ್ತು ಎಂದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago