ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆ ಸಿಬ್ಬಂದಿ ಲಂಚ ಪಡೆದಿರುವುದು ಬೆಳಕಿಗೆ ಬಂದಿದೆ. ವಿಚಾರ ಬಹಿರಂಗವಾಗಿ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೆಯೇ ಲಂಚ ಪಡೆದಿದ್ದ ಹಣವನ್ನು ವಾಪಸ್ ನೀಡಿ ಸಿಬ್ಬಂದಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2000 ರೂ. ಲಂಚಕ್ಕೆ ಬೇಡಿಕೆ ಇಟ್ಟು 1,500 ರೂ. ಕೊಟ್ಟರೂ ಪೋಸ್ಟ್ ಮಾರ್ಟಂ ಮಾಡಿಲ್ಲ ಎಂದು ಸಂತ್ರಸ್ತೆಯ ಕುಟುಂಬದವರು ಆರೋಪಿಸಿದ್ದಾರೆ.
ಸಿಂಧನೂರು ತಾಲ್ಲೂಕಿನ ಕೆಂಗಲ್ ಗ್ರಾಮದ ಅಂಬಮ್ಮ (57) ಎಂಬವರು ಶುಕ್ರವಾರ ಕೆಂಗಲ್ ಗ್ರಾಮದಿಂದ ದಡೆಸುಗೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೂರ್ಛೆ ರೋಗದಿಂದ ಮೃತಪಟ್ಟಿದ್ದರು. ಬಳಿಕ ಮರಣೋತ್ತರ ಪರೀಕ್ಷೆಗೆ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಕೊಂಡೊಯ್ಯಲಾಗಿತ್ತು. ಈ ವೇಳೆ, ಮಂಜುನಾಥ್ ಎಂಬ ಸಿಬ್ಬಂದ ಮರಣೋತ್ತರ ಪರೀಕ್ಷೆಗೆ 2000 ರೂ.ಡಿಮ್ಯಾಂಡ್ ಮಾಡಿದ್ದಾರೆ. ಸಿಬ್ಬಂದಿ ದರ್ಪಕ್ಕೆ ಬೇಸತ್ತು ಮೃತ ಮಹಿಳೆಯ ಕುಟುಂಬದವರು 1500 ರೂ.ನೀಡಿದ್ದರು. ಆದರೆ, ಇನ್ನೂ 500 ರೂ.ಕೊಟ್ಟರೆ ಮಾತ್ರ ಪೋಸ್ಟ್ ಮಾರ್ಟಮ್ ಎಂದಿ ಬೀಗ ಹಾಕಿಕೊಂಡು ಸಿಬ್ಬಂದಿ ಹೋಗಿದ್ದಾರೆ.
ಆಗ ಶವಾಗಾರದ ಬಳಿ ಕರ್ನಾಟಕ ಪ್ರಾಂತ್ಯ ಕೂಲಿಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಲಂಚ ಪಡೆದ ಸಿಬ್ಬಂದಿ ಮಂಜುನಾಥ್ ಅಮಾನತಿಗೆ ಆಗ್ರಹಿಸಿದ್ದಾರೆ. ಕೊನೆಗೆ ಲಂಚ ಪಡೆದಿದ ವ್ಯಕ್ತಿ 1500 ರೂ. ವಾಪಸ್ ನೀಡಿ ಓಡಿ ಹೋಗಿದ್ದಾನೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…