Featured

ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಲಂಚ ಪಡೆದ ಸಿಬ್ಬಂದಿ – Vishwanews24

ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಲಂಚ ಪಡೆದ ಸಿಬ್ಬಂದಿ

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ  ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆ ಸಿಬ್ಬಂದಿ ಲಂಚ ಪಡೆದಿರುವುದು ಬೆಳಕಿಗೆ ಬಂದಿದೆ. ವಿಚಾರ ಬಹಿರಂಗವಾಗಿ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೆಯೇ ಲಂಚ ಪಡೆದಿದ್ದ ಹಣವನ್ನು ವಾಪಸ್ ನೀಡಿ ಸಿಬ್ಬಂದಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2000 ರೂ. ಲಂಚಕ್ಕೆ ಬೇಡಿಕೆ ಇಟ್ಟು 1,500 ರೂ. ಕೊಟ್ಟರೂ ಪೋಸ್ಟ್ ಮಾರ್ಟಂ ಮಾಡಿಲ್ಲ ಎಂದು ಸಂತ್ರಸ್ತೆಯ ಕುಟುಂಬದವರು ಆರೋಪಿಸಿದ್ದಾರೆ.

ಸಿಂಧನೂರು ತಾಲ್ಲೂಕಿನ ಕೆಂಗಲ್ ಗ್ರಾಮದ ಅಂಬಮ್ಮ (57) ಎಂಬವರು ಶುಕ್ರವಾರ ಕೆಂಗಲ್ ಗ್ರಾಮದಿಂದ ದಡೆಸುಗೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೂರ್ಛೆ ರೋಗದಿಂದ ಮೃತಪಟ್ಟಿದ್ದರು. ಬಳಿಕ ಮರಣೋತ್ತರ ಪರೀಕ್ಷೆಗೆ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಕೊಂಡೊಯ್ಯಲಾಗಿತ್ತು. ಈ ವೇಳೆ, ಮಂಜುನಾಥ್ ಎಂಬ ಸಿಬ್ಬಂದ ಮರಣೋತ್ತರ ಪರೀಕ್ಷೆಗೆ 2000 ರೂ.ಡಿಮ್ಯಾಂಡ್ ಮಾಡಿದ್ದಾರೆ. ಸಿಬ್ಬಂದಿ ದರ್ಪಕ್ಕೆ ಬೇಸತ್ತು‌ ಮೃತ ಮಹಿಳೆಯ ಕುಟುಂಬದವರು 1500 ರೂ.ನೀಡಿದ್ದರು. ಆದರೆ, ಇನ್ನೂ ‌500 ರೂ.ಕೊಟ್ಟರೆ ಮಾತ್ರ ಪೋಸ್ಟ್ ಮಾರ್ಟಮ್ ಎಂದಿ ಬೀಗ ಹಾಕಿಕೊಂಡು ಸಿಬ್ಬಂದಿ ಹೋಗಿದ್ದಾರೆ.

ಆಗ ಶವಾಗಾರದ ಬಳಿ ಕರ್ನಾಟಕ ಪ್ರಾಂತ್ಯ ಕೂಲಿಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಲಂಚ ಪಡೆದ ಸಿಬ್ಬಂದಿ ಮಂಜುನಾಥ್ ಅಮಾನತಿಗೆ ಆಗ್ರಹಿಸಿದ್ದಾರೆ. ಕೊನೆಗೆ ಲಂಚ ಪಡೆದಿದ ವ್ಯಕ್ತಿ 1500 ರೂ. ವಾಪಸ್ ನೀಡಿ ಓಡಿ ಹೋಗಿದ್ದಾನೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

12 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

12 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

13 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

13 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

13 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

15 hours ago