Featured

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿದ್ರೆ ಕಠಿಣ ಕ್ರಮ : ಶ್ರೀರಾಮುಲು -Vishwanews24

ಚಾಮರಾಜನಗರ: ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿದ್ರೆ ಕಠಿಣ ಕ್ರಮ ಜರುಗಿಸಲಾಗುತ್ತೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸರ್ಕಾರಿ ವೈದ್ಯರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ ಬಳಿಕ ಸರ್ಕಾರಿ ವೈದ್ಯರಿಗೆ ಖಡಕ್ ಸಂದೇಶ ರವಾನಿಸಿದ ಶ್ರೀರಾಮುಲು, ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಎರಡೂ ಕಡೆ ಕೆಲಸ ಮಾಡಿದ್ರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇದು ಒಂದು ದೊಡ್ಡ ದಂಧೆಯಾಗಿದೆ. ಇದನ್ನು ಕೂಡಲೇ ತಡೆಗಟ್ಟುತ್ತೇನೆ. ಬೇಕಾದ್ರೆ ವಾಲೆಂಟರಿ ರಿಟೈರ್ಮೆಂಟ್ ಕೊಟ್ಟು ಹೋಗಲಿ. ಅಂತವರಿಂದ ನಮಗೆ ಅವಶ್ಯಕತೆ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಅವರು ಎಂಥಾ ತಜ್ಞ ವೈದ್ಯರಾದರೂ ಸರಿ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು. ನಾನು ನಾಳೆಯಿಂದಲೇ ಆದೇಶ ಹೊರಡಿಸುತ್ತೇನೆ. ಯಾರ್ಯಾರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರೋ ಅವರು ಅಲ್ಲೇ ಮಾಡಿಕೊಳ್ಳಲಿ. ಅವರ ಮೇಲೆ ಮೂಲಾಜಿಟ್ಟು ಸರ್ಕಾರಿ ಆಸ್ಪತ್ರೆ ನಡೆಸೋಕೆ ಆಗಲ್ಲ. ಅವರು ಹಾಗೇನಾದ್ರು ಮಾಡಿದ್ರೆ ಅವರಿಗೆ ಏನೇನು ಇಂಕ್ರಿಮೆಂಟ್ಸ್ ಕಟ್ ಮಾಡಿ. ಅವರ ಜೀವಮಾನದಲ್ಲಿ ಮತ್ತೆ ಸರ್ಕಾರಿ ಕೆಲಸ ಸಿಕ್ಕಬಾರದು ಹಾಗೆ ಮಾಡುತ್ತೇನೆ ಎಂದು ಶ್ರೀರಾಮುಲು ಸೂಚಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

10 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

10 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago