Featured

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಿ ಲೈಂಗಿಕ ಸಂಪರ್ಕ : ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು -Vishwanews24

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಿ ಲೈಂಗಿಕ ಸಂಪರ್ಕ : ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು -Vishwanews24

ಬೆಂಗಳೂರು: “ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿ, ವಿಡಿಯೋ ಕರೆ ಮಾಡಿ ಆಶ್ಲೀಲವಾಗಿ ನಡೆದುಕೊಳ್ಳುವಂತೆ ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ” ಇದು ಸಿಡಿ ಪ್ರಕರಣದಲ್ಲಿ ಯುವತಿ ಇಂದು ನೀಡಿದ ದೂರಿನ ಸಾರಾಂಶ.

ಯುವತಿ ಇಂದು ವಕೀಲ ಜಗದೀಶ್ ಅವರ ಮೂಲಕ ಲಿಖಿತ ದೂರನ್ನು ಪೊಲೀಸರಿಗೆ ನೀಡಿದ್ದಾಳೆ.

ಇದನ್ನೂ ಓದಿ : ಮುಂಬೈ :ರೋಗಿಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕಟ್ಟುನಿಟ್ಟಿನ ಲಾಕ್ ಡೌನ್: ಮಹಾ ಡಿಸಿಎಂ ಅಜಿತ್ ಪವಾರ್ ಎಚ್ಚರಿಕೆ -Vishwanews24

“ನಾನು ಬೆಂಗಳೂರಿಗೆ ಕೆಲಸಕ್ಕೆಂದು ಬಂದಿದ್ದು, ಕಿರುಚಿತ್ರ ಮಾಡುವ ಸಲುವಾಗಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದ್ದರು. ಸಚಿವರು ನನ್ನ ಕುಟುಂಬದ ಬಗ್ಗೆ ವಿಚಾರಿಸಿ ಆಪ್ತವಾಗಿ ಮಾತನಾಡುತ್ತಿದ್ದರು. ನನಗೆ ಸರ್ಕಾರಿ ನೌಕರಿ ನೀಡುವುದಾಗಿ ಹೇಳಿದ್ದರು. ನನ್ನ ಬಳಿ ಲಕ್ಷಾಂತರ ರೂ ಹಣವಿಲ್ಲವೆಂದು ತಿಳಿದ ಅವರು, ಅವರು ಹೇಳಿದಂತೆ ಕೇಳಬೇಕೆಂದು ಹೇಳಿದ್ದರು” ಎಂದು ದೂರಿನಲ್ಲಿ ವಿವರಿಸಲಾಗಿದೆ.

ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಅವರು ವಿಡಿಯೋ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದರು. ಅವರು ಪ್ರಭಾವಿಯಾದ ಕಾರಣ ಅವರು ಹೇಳಿದಂತೆ ನಾನು ಕೇಳಿದೆ. ನಂತರ ಬೆಂಗಳೂರು ನಿವಾಸಕ್ಕೆ ಬಂದು ಕೆಲಸದ ವಿಚಾರ ಮಾತನಾಡುವುದಿದೆ, ಮನೆಗೆ ಬಾ ಎಂದು ಕರೆದಿದ್ದರು. ಅವರು ಹೇಳಿದ ಅಪಾರ್ಟ್ ಮೆಂಟ್ ಗೆ ಹೋದೆ. ಅವರು ನನ್ನೊಂದಿಗೆ ಅಶ್ಲೀಲವಾಗಿ ಮಾತನಾಡಿ, ಕೋಣೆಯಲ್ಲಿ ಲೈಂಗಿಕ ಕ್ರಿಯೆ ನಡೆಸಿದರು. ಎರಡು ಬಾರಿ ಈ ರೀತಿ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇನೆ, ಇನ್ನು ಇದ್ಯಾವ ಲೆಕ್ಕ : ರಮೇಶ್ ಜಾರಕಿಹೊಳಿ -Vishwanews24

ನನಗೆ ಸರ್ಕಾರಿ ನೌಕರಿ ನೀಡದೆ ಮೋಸ ಮಾಡಿದ್ದಾರೆ. ನಾನು ದೂರು ನೀಡದಂತೆ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಭದ್ರತೆ ಇಲ್ಲದ ಕಾರಣ ನಾನು ಪರಿಚಿತ ವಕೀಲರ ಮೂಲಕ ದೂರು ನೀಡುತ್ತಿದ್ದೇನೆ ಎಂದು ಯುವತಿ ತಿಳಿಸಿದ್ದಾಳೆ.

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

24 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

27 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

32 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

37 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago