Featured

ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆ – vishwanews24

ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ದಾವಣಗೆರೆ: ಪದವಿ ಪೂರೈಸಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಯುವಕ ಅಂಜಿನಪ್ಪ (26) ನೇಣು ಬಿಗಿದುಕೊಂಡ ಅತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಅಂಜಿನಪ್ಪ ಪದವಿ ಮುಗಿಸಿದಾಗಿನಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುತ್ತಿದ್ದ. ಅಲ್ಲದೇ ತನ್ನ ರೂಂನಲ್ಲಿ ನಿರಂತರವಾಗಿ ಓದುತ್ತಿದ್ದ. ಆದರೂ ತಾನು ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗುತ್ತಿಲ್ಲ ಎಂದು ಮನ ನೊಂದಿದ್ದ. ಅಲ್ಲದೇ, ಕೊಠಡಿಯಲ್ಲಿ ಎಲ್ಲಿ ನೋಡಿದರೂ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳೇ ಇದ್ದವು. ಎಷ್ಟೇ ಪ್ರಯತ್ನ ಪಟ್ಟರೂ ಕೆಲಸ ಸಿಗುತ್ತಿಲ್ಲ ಎಂದು ಸ್ನೇಹಿತರ ಬಳಿ ಆಗಾಗ ಬೇಸರ ತೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.

ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಮನೆಯ ಮೇಲೆ ಅಂಜಿನಪ್ಪನ ತಾಯಿ ಬಟ್ಟೆ ತೊಳೆದು ಒಣಗಿ ಹಾಕಿದ್ದ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ ಊಟಕ್ಕೆ ಬಂದಿಲ್ಲ ಎಂದು ಮನೆಯವರು ಬಾಗಿಲು ಬಡಿದರೂ ಮಗ ಬಾಗಿಲು ತೆಗೆದಿಲ್ಲ. ಮಲಗಿರಬಹುದೇನೋ ಎಂದು ಭಾವಿಸಿ ಪೋಷಕರು ಸುಮ್ಮನಾಗಿದ್ದರು. ಬೆಳಗ್ಗೆ ಮತ್ತೆ ಬಾಗಿಲು ತಟ್ಟಿದರೂ ಅಂಜಿನಪ್ಪ ಬಾಗಿಲು ತೆಗೆದಿಲ್ಲ. ನಂತರ ಕಿಟಕಿಯಿಂದ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಗಮನಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬ0ಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

21 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

22 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

22 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago