ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ – vishwanews24
ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ
ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ (68) ಅವರ ಅಂತ್ಯಕ್ರಿಯೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ಮೂರು ಸುತ್ತು ಕುಶಲತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ ಸೂಚಿಸಲಾಗಿದೆ. ಅಂತ್ಯಕ್ರಿಯೆಗೂ ಮುನ್ನ ಹೆಚ್ಎಸ್ಆರ್ ಲೇಔಟ್ನ ಎಂಸಿಹೆಚ್ಎಸ್ ಕ್ಲಬ್ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಓಂ ಪ್ರಕಾಶ್ ಜೊತೆಗೆ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳು ಅಂತಿಮ ದರ್ಶನ ಪಡೆದರು. ಈ ವೇಳೆ ಅವರ ಜೊತೆಗಿನ ಒಡನಾಟ ನೆನೆದು ಕಣ್ಣೀರಿಟ್ಟಿದ್ದಾರೆ.
ಅಂತ್ಯಸಂಸ್ಕಾರದ ವೇಳೆ ಓಂ ಪ್ರಕಾಶ್ ಸಹೋದರಿ ಮತ್ತು ಪುತ್ರ ಕಾರ್ತೀಕೇಶ್ ಕಣ್ಣೀರಿಟ್ಟಿದ್ದಾರೆ. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
