ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ.
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್ ವ್ಯವಸ್ಥೆಯನ್ನ ಸರ್ಕಾರ ನೀಡಲಿದೆ ಎಂದಿದ್ದಾರೆ.
ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸರ್ಕಾರ ತೀರ್ಮಾನಿಸಿದೆ. ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆಯೂ ಇದಾಗಿದೆ ಎಂದು ಎಕ್ಸ್‌ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…