ಬೆಂಗಳೂರು: ತಮ್ಮ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾದ ಕಿಂಗ್‌ಪಿನ್‌ಗಳನ್ನು ಮಟ್ಟ ಹಾಕಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದು, ಈ ಸಂಬಂಧ ಬೆಂಗಳೂರು ಅಪರಾಧ ವಿಭಾಗದ ನೂತನ ಹೆಚ್ಚುವರಿ ಆಯುಕ್ತರಾಗಿ ನೇಮಕಗೊಂಡಿರುವ ಅಲೋಕ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಬೆಳಗಾವಿಗೆ ತೆರಳಿದ್ದ ವೇಳೆ ಸದ್ಯ ಅಲ್ಲಿಯೇ ಪಶ್ಚಿಮ ವಲಯದ ಐಜಿಪಿಯಾಗಿರುವ ಅಲೋಕ್ ಕುಮಾರ್ ಅವರೊಂದಿಗೆ ಕುಮಾರಸ್ವಾಮಿ ಅವರು ಕೆಲ ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ. ರಾಜಧಾನಿ ಬೆಂಗಳೂರಿಗೆ ಬಂದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಗರದಲ್ಲಿ ಹೆಚ್ಚುತ್ತಿರುವ ಇಸ್ಪೀಟ್ ಜೂಜು, ಅಕ್ರಮ ಲಾಟರಿ ದಂಧೆ, ಹೈಟೆಕ್ ವೇಶ್ಯಾವಾಟಿಗೆ, ಮೀಟರ್ ಬಡ್ಡಿ ಮಾಫಿಯಾಗಳಲ್ಲಿ ತೊಡಗಿಸಿಕೊಂಡವರಿಗೆ ಬುದ್ಧಿ ಕಲಿಸುವ ಮೂಲಕ ಕಡಿವಾಣ ಹಾಕಬೇಕು. ಯಾವುದೇ ಕಾರಣಕ್ಕೂ ಮೃದು ಧೋರಣೆ ತಾಳದೆ, ಯಾವುದೇ ಮುಲಾಜು ನೋಡದೆ ಕಠಿಣ ಕ್ರಮ ಕೈಗೊಳ್ಳಿ.
ನಿಮಗೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂಬ ಮಾತನ್ನು ಕುಮಾರಸ್ವಾಮಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸಿದ್ದಾರೆ ಎನ್ನಲಾದ ಕಿಂಗ್‌ಪಿನ್‌ಗಳಿಗೆ ನಡುಕ ಉಂಟಾಗಿದೆ. ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ತಕ್ಷಣವೇ ಕಾರ್ಯಾರಂಭ ಮಾಡಲಿದ್ದಾರೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…