Featured

ಸರ್ಕಾರ ಅಸ್ಥಿರ ಯತ್ನಕ್ಕೆ ಬ್ರೇಕ್ ಹಾಕಲು ಮುಖ್ಯಮಂತ್ರಿ ಗುಪ್ತ ಮಾತುಕತೆ

ಬೆಂಗಳೂರು: ತಮ್ಮ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾದ ಕಿಂಗ್‌ಪಿನ್‌ಗಳನ್ನು ಮಟ್ಟ ಹಾಕಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದು, ಈ ಸಂಬಂಧ ಬೆಂಗಳೂರು ಅಪರಾಧ ವಿಭಾಗದ ನೂತನ ಹೆಚ್ಚುವರಿ ಆಯುಕ್ತರಾಗಿ ನೇಮಕಗೊಂಡಿರುವ ಅಲೋಕ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.

ಶನಿವಾರ ಬೆಳಗಾವಿಗೆ ತೆರಳಿದ್ದ ವೇಳೆ ಸದ್ಯ ಅಲ್ಲಿಯೇ ಪಶ್ಚಿಮ ವಲಯದ ಐಜಿಪಿಯಾಗಿರುವ ಅಲೋಕ್ ಕುಮಾರ್ ಅವರೊಂದಿಗೆ ಕುಮಾರಸ್ವಾಮಿ ಅವರು ಕೆಲ ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ. ರಾಜಧಾನಿ ಬೆಂಗಳೂರಿಗೆ ಬಂದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಗರದಲ್ಲಿ ಹೆಚ್ಚುತ್ತಿರುವ ಇಸ್ಪೀಟ್ ಜೂಜು, ಅಕ್ರಮ ಲಾಟರಿ ದಂಧೆ, ಹೈಟೆಕ್ ವೇಶ್ಯಾವಾಟಿಗೆ, ಮೀಟರ್ ಬಡ್ಡಿ ಮಾಫಿಯಾಗಳಲ್ಲಿ ತೊಡಗಿಸಿಕೊಂಡವರಿಗೆ ಬುದ್ಧಿ ಕಲಿಸುವ ಮೂಲಕ ಕಡಿವಾಣ ಹಾಕಬೇಕು. ಯಾವುದೇ ಕಾರಣಕ್ಕೂ ಮೃದು ಧೋರಣೆ ತಾಳದೆ, ಯಾವುದೇ ಮುಲಾಜು ನೋಡದೆ ಕಠಿಣ ಕ್ರಮ ಕೈಗೊಳ್ಳಿ.

ನಿಮಗೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂಬ ಮಾತನ್ನು ಕುಮಾರಸ್ವಾಮಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸಿದ್ದಾರೆ ಎನ್ನಲಾದ ಕಿಂಗ್‌ಪಿನ್‌ಗಳಿಗೆ ನಡುಕ ಉಂಟಾಗಿದೆ. ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ತಕ್ಷಣವೇ ಕಾರ್ಯಾರಂಭ ಮಾಡಲಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

10 minutes ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

28 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago