Featured

ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡುವ ಮೂಲಕ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ : ಬಿ.ಟಿ.ಲಲಿತಾ ನಾಯ್ಕ್‌

ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡುವ ಮೂಲಕ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ

ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ

ದೈವ ನರ್ತಕರು ʻಓಹೋʼ ಅಂತ ಚಿರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ

ರಿಷಬ್ ಶೆಟ್ಟಿ ಬಹಳಷ್ಟು ಬುದ್ದಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ..

ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್‌ ಹೇಳಿಕೆ

ಹುಬ್ಬಳ್ಳಿ: ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕರಿಗೆ  ಸರ್ಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್‌ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ  ಮಾತನಾಡಿದ ಅವರು, ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು ʻಓಹೋʼ ಅಂತ ಚಿರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ..ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮೂವರನ್ನುವಶಕ್ಕೆ ಪಡೆದ ಎನ್ಐಎ – Vishwanews24

ʻಕಾಂತಾರʼ ಚಿತ್ರದ ವಿವಾದ ಕುರಿತು ಮಾತನಾಡಿ, ರಿಷಬ್ ಶೆಟ್ಟಿ  ಪಕ್ಕಾ ವಿಚಾರವಾದಿ‌, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡಿಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸತ್ಯವನ್ನು ನೇರವಾಗಿ ಹೇಳಿದರೇ ಆತನನ್ನು ಕೊಂದ ಹಾಕುತ್ತಾರೆ, ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕಬೇಕು ಅಂತ ಬಹಳಷ್ಟು ಬುದ್ದಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ. ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ..ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮೂವರನ್ನುವಶಕ್ಕೆ ಪಡೆದ ಎನ್ಐಎ – Vishwanews24

ʻಕಾಂತಾರʼ ಕಾಡಿನ ಜನರ ನೋವಿನ ಕಥೆ. ಅವರನ್ನು ಜಮೀನ್ದಾರಿ ಪದ್ಧತಿಯ ಮೂಲಕ ಒಕ್ಕಲೆಬ್ಬಿಸಲು ನೋಡಿದರು. ಅವರಿಗೆ ಬಹಳಷ್ಟು ಚಿತ್ರಹಿಂಸೆ ನೀಡಿದರು. ಹೀಗಾಗಿ ಅವರು ತಮ್ಮ ಉಳಿವಿಗಾಗಿ ಪೊಲೀಸರು ಮತ್ತು ಸರ್ಕಾರದ ಮೊರೆ ಹೋದರು. ಅವರಿಂದ ನ್ಯಾಯ ಸಿಗದೆ ಚಿರಾಡಿ, ಚಿರಾಡಿ ತಮ್ಮ ನೋವು ಹೊರಹಾಕಿದರು. ಅದನ್ನೇ ದೈವ ಅಂತ ನಂಬಲಾಗುತ್ತಿದೆ. ದೇಶದ ಬಾವುಟ… ಅದು ಕೇವಲ ಬಾವುಟ ಮಾತ್ರ. ಅದನ್ನು ಹರಿದು ಹಾಕಿದರು ಏನು ಆಗಲ್ಲ. ಆದರೆ ದೇಶದ ಜನರ ಕಾಪಾಡುತ್ತೆ ಎನ್ನುವ ಭಾವನೆ ಮುಖ್ಯ ಎಂದು ತಿಳಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago