ಸರ್ಕಾರ ಬದಲಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ನೇಮಕಾತಿ ರದ್ದು – Vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಸರ್ಕಾರ ಬದಲಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ತಾತ್ಕಾಲಿಕ ನೌಕರಿ ನೇಮಕಾತಿ ರದ್ದು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.

ಈ ಹಿಂದಿನ ಬೊಮ್ಮಾಯಿ ಸರ್ಕಾರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಕಾಂಗ್ರೆಸ್ ನೂತನ ಸರ್ಕಾರ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ರದ್ದು ಮಾಡಿದೆ.

ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು, ನಂತರ ಪ್ರವೀಣ್ ಪತ್ನಿಗೆ ಕೆಲಸ ನೀಡುವಂತೆ ಆಗ್ರಹಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ತಾತ್ಕಾಲಿಕವಾಗಿ ಅವರನ್ನು ನೇಮಕ ಮಾಡಲಾಗಿತ್ತು.

Leave a Reply