Featured

ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನ ಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ : ಶಾಸಕ ಸುನೀಲ್ ಕುಮಾರ್ – Vishwanews24

ಆರೋಪಿಗಳ ಮೇಲಿನ ಕೇಸ್ ಕೈ ಬಿಡುವಂತೆ ಸೂಚಿಸಿರುವುದು ಸಂಪೂರ್ಣ ಕಾನೂನು ಬಾಹಿರ : ಶಾಸಕ ಸುನೀಲ್ ಕುಮಾರ್

ಬೆಂಗಳೂರು: ಕೆಜಿಹಳ್ಳಿ ಡಿಜೆಹಳ್ಳಿ  ಪೊಲೀಸ್ ಠಾಣೆಯ ಮೇಲೆ ನಡೆದ ಗೂಂಡಾ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಕೈ ಬಿಡುವಂತೆ ಸೂಚಿಸಿರುವುದು ಸಂಪೂರ್ಣ ಕಾನೂನು ಬಾಹಿರ ಎಂದು ಶಾಸಕ ಸುನೀಲ್ ಕುಮಾರ್  ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.

ಶಾಸಕ ತನ್ವೀರ್ ಸೇಠ್ ಬರೆದ ಪತ್ರ ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪೊಲೀಸ್ ಇಲಾಖೆಗೆ ಬರೆದ ಪತ್ರ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಸರ್ಕಾರ ಮುಸ್ಲಿಂ ಓಲೈಕೆಗಾಗಿ ಸಂವಿಧಾನ ಬಾಹಿರವಾಗಿ ವರ್ತಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಕರ್ನಾಟಕದ ಪೊಲೀಸರು ಆಳುವ ಸರ್ಕಾರದ ಆಳುಗಳಂತೆ ವರ್ತಿಸುವುದಕ್ಕೆ ಮುನ್ನ ಆ ದಿನ ನಡೆದ ಭೀಬತ್ಸ ಘಟನೆಯನ್ನು ನೆನಪು ಮಾಡಿಕೊಳ್ಳಲಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಲೆಟರ್ ಹೆಡ್‍ನಲ್ಲಿರುವ ಟಿಪ್ಪಣಿ ಕುರಿತ ಪತ್ರ ಲಗ್ಗತಿಸಿ ಉಗ್ರ ಮನಸ್ಥಿತಿಯ ವ್ಯಕ್ತಿಗಳಿಗೆ ಅಮಾಯಕರ ಪಟ್ಟ ಕಟ್ಟಿ ದೇಶವನ್ನು ಸಿರಿಯಾ ಮಾಡುತ್ತೀರಾ? ಇದು ಗೃಹ ಸಚಿವರು ಸೂಚಿಸಿರುವುದು ನಿಜವೇ ಎಂದು ಅವರು ಪ್ರಶ್ನಿಸಿದ್ದಾರೆ.

ಹಂಚಿಕೊಂಡ ಪತ್ರದಲ್ಲೇನಿದೆ?

ಶ್ರೀ ತಸ್ವೀರ್ ಸೇಠ್, ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರು. ನರಸಿಂಹರಾಜ ಕ್ಷೇತ್ರ ಇವರು ಸಲ್ಲಿಸಿರುವ ಮನವಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಮನವಿಯಲ್ಲಿ, ಬೆಂಗಳೂರು ನಗರದ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ ಹಾಗೂ ಗಲಭೆಗಳಲ್ಲಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳು, ಸುಳ್ಳು ಮೊಕದ್ದಮೆಗಳಲ್ಲಿ ಬಂಧಿತರಾಗಿದ್ದು, ಸದರಿ ಮೊಕದ್ದಮೆಗಳನ್ನು ಮರು ಪರಿಶೀಲಿಸಿ ನಿಯಮಾನುಸಾರ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಕೋರಲಾಗಿದೆ. ಈ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago