ಬೆಂಗಳೂರು: ನನ್ನ ಮೇಲೆ ಎಷ್ಟೇ ಒತ್ತಡ ಹಾಕಿ ಇಲ್ಲವೇ ಬ್ಲಾಕ್‍ಮೇಲ್ ಮಾಡಿದರೂ ಸರಿಯೇ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲಸರ್ಕಾರ ರಚನೆಗೆ ಕಾರಣರಾದ ಅನರ್ಹರಿಗೆ ಯಾವುದೇ ಕಾರಣಕ್ಕೂ ನಾನು ಕೊಟ್ಟ ಮಾತಿಗೆ ತಪ್ಪುವುದಿಲ್ಲ. ಎಂದು ಬಿಎಸ್‍ವೈ ಹೇಳಿದ್ದಾರೆ.
ಅನರ್ಹರಾದವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿ ನಂತರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು. ಇತ್ತೀಚೆಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ವೇಳೆ ಇದೇ ಮಾತನ್ನು ಹೇಳಿದ್ದೇನೆ. ನಮ್ಮನ್ನು ನಂಬಿ ಬಂದವರಿಗೆ ವಿಷ ಕೊಡಲು ಸಾಧ್ಯವೇ ಎಂದು ಬಿಎಸ್‍ವೈ ಪ್ರಶ್ನಿಸಿದ್ದಾರೆ.
ಇದು ಅತ್ಯಂತ ವಿಷಮ ಪರಿಸ್ಥಿತಿ. ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹರಾದವರಿಗೆ ಟಿಕೆಟ್ ನೀಡಲೇಬೇಕು. ರಾಜೀನಾಮೆ ನೀಡುವ ಮುನ್ನ ಅವರಿಗೆ ಮಂತ್ರಿ ಸ್ಥಾನ ನೀಡುವ ವಾಗ್ದಾನ ಮಾಡಲಾಗಿತ್ತು. ಈಗ ಮಾತಿಗೆ ತಪ್ಪಿದರೆ ವಚನಭ್ರಷ್ಟರಾಗುತ್ತೇವೆ ಎಂದು ಬಿಎಸ್‍ವೈ ಹೇಳಿದ್ದಾರೆ.
ಬಿಜೆಪಿ ಸರ್ಕಾರ ರಚನೆಯಾಗಿದ್ದ ಈ ಅನರ್ಹ ಶಾಸಕರಿಂದ. ಅವರನ್ನು ನಾವು ನಡುಬೀದಿಯಲ್ಲಿ ಬಿಡಲು ಸಾಧ್ಯವೇ ಇಲ್ಲ. ನಾವು ಈಗ ಅನರ್ಹರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಮುಂದೆ ನಮ್ಮ ಪಕ್ಷವನ್ನು ಯಾರೊಬ್ಬರೂ ನಂಬುವುದಿಲ್ಲ. ಯಾರೇ ಎಷ್ಟೇ ಅಡ್ಡಿಪಡಿಸಿದರೂ ಸರಿಯೇ. ನಾನು ಕೊಟ್ಟ ಮಾತಿನಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…