Udupi : ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಡೆಹಿಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಮಣಿಪಾಲದಲ್ಲಿ ನಡೆದ ಪ್ರತಿಭಟನೆ ಸಂಬಂಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಖಂಡಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದು ಹಕ್ಕು. ಸರ್ಕಾರ ಸಂವಿಧಾನ ದತ್ತ ಹಕ್ಕನ್ನು ಮೊಟಕುಗೊಳಿಸಲು ಯತ್ನಿಸುತ್ತಿದೆ. ಸರ್ಕಾರವೇ ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಿಕ್ಷಕರಿಗಾದ ಅನ್ಯಾಯದ ವಿರುದ್ಧ ನ್ಯಾಯಯುತವಾಗಿ ಪ್ರತಿಭಟಿಸಿರುವ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು ವಾಮ ಮಾರ್ಗದಿಂದ ಪ್ರತಿಭಟನಾಕಾರರನ್ನು ಬೆದರಿಸುವ ಹತಾಶ ಯತ್ನದಲ್ಲಿ ತೊಡಗಿದ್ದು ಅದು ಸಫಲವಾಗದು ಎಂದು ಗೀತಾಂಜಲಿ ಸುವರ್ಣ ಎಚ್ಚರಿಸಿದ್ದಾರೆ.
ಹಗರಣಗಳ ಸರಮಾಲೆ ಹಾಗೂ ದ್ವೇಷ ರಾಜಕಾರಣದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ತೀವ್ರ ಮಳೆಯಿಂದಾಗಿ ಆಸ್ತಿಪಾಸ್ತಿ ಕಳಕೊಂಡ ಸಂತ್ರಸ್ತರತ್ತ ಮುಖ ಮಾಡದ ಸರಕಾರ ಮುಲಭೂತ ಆದ್ಯತೆಗಳ ಸಹಿತ ಅಭಿವೃದ್ಧಿಯನ್ನೂ ಕಡೆಗಣಿಸಿದೆ. ರಸ್ತೆ ದುರಸ್ತಿಗೂ ಹಣ ನೀಡದ ಸ್ಥಿತಿ ತಲುಪಿರುವಾಗ ಅನ್ಯಾಯದ ವಿರುದ್ಧ ರಸ್ತೆ ತಡೆ ಮಾಡಿದವರ ವಿರುದ್ಧ ಕೇಸು ದಾಖಲಿಸುವ ಮೂಲಕ ಸರ್ಕಾರ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ ಎಂದು ಗೀತಾಂಜಲಿ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…