ಮಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧರಿಸುವ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಮತದಾರರು ವಿಜಯದ ಮಾಲೆಯನ್ನು ಬಿಜೆಪಿ ಕೊರಳಿಗೆ ಹಾಕಿದ್ದಾರೆ. ಈ ಹಿನ್ನೆಲೆ ಮಂಗಳೂರು ಶಾಸಕ ಡಿ. ವೇದವ್ಯಾಸ್ ಕಾಮತ್ ಶುಭ ಕೋರಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಶುಭ ಕೋರಿದ ಶಾಸಕ ಕಾಮತ್, ನಮ್ಮ ಸಂಸದರೂ ಹಾಗೂ ರಾಜ್ಯಾದ್ಯಕ್ಷರ ಪ್ರಬಲ ನಾಯಕತ್ವದಲ್ಲಿ ಉಪಚುನಾವಣೆ ಎದುರಿಸಿದ್ದ ಬಿಜೆಪಿ ನಿರೀಕ್ಷೆಯಂತೆ ರಾಜ್ಯದಲ್ಲಿ ಗೆದ್ದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮುಂದಿನ ಮೂರು ವರ್ಷ ಸ್ಥಿರ ಸರ್ಕಾರ ಇರಲಿದೆ. ಜನರಿಗೆ ಬಿಜೆಪಿ ಪಕ್ಷದ ಮೇಲೆ ಇರುವ ವಿಶ್ವಾಸಕ್ಕೆ ಈ ಗೆಲುವು ಸಾಕ್ಷಿಯಾಗಿದೆ. ಮಧ್ಯಂತರ ಚುನಾವಣೆಯೇ ಬೇಡ ಅನ್ನೋ ನಿರ್ಧಾರಕ್ಕೆ ಮತದಾರರು ಜೈ ಅಂದಿದ್ದಾರೆ. ರಾಜ್ಯದಲ್ಲಿ ಸರ್ಕಾರ ಸುಭದ್ರವಾಗಿದ್ದು, ಉತ್ತಮ ಆಡಳಿತವನ್ನು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…