Featured

ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ : ದೇವೇಗೌಡ -Vishwanews24

ಬೆಂಗಳೂರು: ಅಧಿಕಾರ ಕಳೆದುಕೊಂಡ ಮಾತ್ರಕ್ಕೆ ಜೆಡಿಎಸ್​ಅನ್ನು ಮುಗಿಸಲು ಸಾಧ್ಯವಿಲ್ಲ. ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ ಎಂಬ ವಿಶ್ವಾಸವನ್ನು ಜೆಡಿಎಸ್​ ವರಿಷ್ಠ ದೇವೇಗೌಡ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಹೆಚ್ ಡಿಡಿ, ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅತೃಪ್ತ ಶಾಸಕರಿಗೆ ನೆಮ್ಮದಿಯಿಂದ ಇರಲು ಬಿಡುವುದಿಲ್ಲ.ಯಾರೇ ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಮುಗಿಸಲಾಗಲ್ಲ, ಸಿಎಂ ಆಗಿ ಕುಮಾರಸ್ವಾಮಿ ನೋವು ತಿಂದಿದ್ದಾರೆ. ಎಷ್ಟು ಕಷ್ಟಪಟ್ಟಿದ್ದಾರೆ ಎಲ್ಲಾ ಗೊತ್ತಿದೆ.

14 ತಿಂಗಳು ಆಡಳಿತ ನಡೆಸಿ ಮನೆಗೆ ಹೋಗಬೇಕಲ್ಲ ಎಂಬ ನೋವು ಕಾಂಗ್ರೆಸ್​​ಗೂ ಇದೆ. ಸರ್ಕಾರ ಹೋಗಿದೆ ಏನು ಮಾಡಲು ಸಾಧ್ಯವಿಲ್ಲ. ಆದರೆ ಪಕ್ಷ ಇದೆ. ಅದನ್ನು ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಸೋತ ಬಳಿಕ ನನ್ನ ಗುರಿ ಪಕ್ಷ ಸಂಘಟನೆ ಎಂಬುದನ್ನು ನಿರ್ಧರಿಸಿದ್ದೆ, ಅದರಂತೆ ಪಕ್ಷವನ್ನು ಬಲಗೊಳಿಸುತ್ತೇನೆ. ಇದಕ್ಕಾಗಿ ಆ.7ರಂದು ಅರಮನೆ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಚುನಾವಣೆಗೆ ಈಗಲೇ ಸಿದ್ದರಾಗಬೇಕು. ಕುಮಾರಸ್ವಾಮಿ ಸರ್ಕಾರದ ಸಾಲಮನ್ನಾ, ಬಡವರ ಬಂಧು,‌ ಋಣಮುಕ್ತ ಕಾಯ್ದೆ ಬಗ್ಗೆ ಮನೆ ಮನೆಗೆ ಪ್ರಚಾರ ನಡೆಸಿ ಜನರ ಬಳಿ ಹೋಗುತ್ತೇವೆ ಎಂದರು.

ವಿಷಯಾಧಾರಿತವಾಗಿ ನಾವು ಬಿಜೆಪಿಗೆ ಬೆಂಬಲ ಕೊಡುತ್ತೇವೆ. ಹಣಕಾಸು ವಿಧೇಯಕಕ್ಕೆ ನಮ್ಮ ಬೆಂಬಲ ಇರುತ್ತದೆ. ಎಲ್ಲರೂ ಸರ್ವಾನುಮತದಿಂದ ಒಪ್ಪಿದರೆ ಬೆಂಬಲ ನೀಡುತ್ತೇವೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago