Featured

ಸರ್ಜಿ ಹೆಸರಲ್ಲಿ ಕಹಿ ಸ್ವೀಟ್‌ ಬಾಕ್ಸ್‌ ಕಳುಹಿಸಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌  : ಆರೋಪಿ ಪೊಲೀಸ್ ವಶಕ್ಕೆ – vishwanews24

ಸರ್ಜಿ ಹೆಸರಲ್ಲಿ ಕಹಿ ಸ್ವೀಟ್‌ ಬಾಕ್ಸ್‌ ಕಳುಹಿಸಿದ್ದ  ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌  ; ಆರೋಪಿ ಪೊಲೀಸ್ ವಶಕ್ಕೆ

ಶಿವಮೊಗ್ಗ: ಕೆಲ ದಿನಗಳ ಹಿಂದೆ ಚರ್ಚೆಗೆ ಕಾರಣವಾಗಿದ್ದ ಡಾ.ಧನಂಜಯ ಸರ್ಜಿ ಹೆಸರಲ್ಲಿ ಕಹಿ ಸ್ವೀಟ್‌ ಬಾಕ್ಸ್‌ ಕಳುಹಿಸಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಕಹಿ ತುಂಬಿ ಸ್ವೀಟ್‌ ಹಾಕಿ ಕಳುಹಿಸಿದ್ದ ಆರೋಪಿ ಸೌಹಾರ್ದ್‌ ಪಟೇಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೂವರು ಗಣ್ಯರನ್ನು ಟಾರ್ಗೆಟ್‌ ಮಾಡಿ ಸ್ವೀಟ್ ಬಾಕ್ಸ್‌ ಕಳುಹಿಸಿದ್ದ ಎಂಬ ಮಾಹಿತಿ ಹೊರಬಿದ್ದಿದೆ.

ಎಲ್‌ಎಲ್‌ಬಿ ಮುಗಿಸಿ ಲಾಯರ್ ಆಗಿದ್ದ ಸೌಹಾರ್ದ ಪಟೇಲ್ ಎಂಬಾತನೇ ಆರೋಪಿ. ಈತ ಎನ್ಇಎಸ್ ಕಾರ್ಯದರ್ಶಿ ನಾಗರಾಜ್, ಮಾನಸಿಕ ವೈದ್ಯರಾದ ಡಾ. ಅರವಿಂದ್ ಮತ್ತು ಡಾ. ಕೆ ಎಸ್ ಪವಿತ್ರ ಎಂಬವರನ್ನು ಟಾರ್ಗೆಟ್ ಮಾಡಿ ಸರ್ಜಿ ಹೆಸರಿನಲ್ಲಿ ಸ್ವೀಟ್ ಬಾಕ್ಸ್ ಕಳುಹಿಸಿದ್ದ.

ಮಾನಸಿಕ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಸೌಹಾರ್ದ ಪಟೇಲ್ ಈ ಹಿಂದೆ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗೆ ಸೇರಿದ ಕಾನೂನು ಕಾಲೇಜಿನಲ್ಲಿ ಎಲ್ಎಲ್‌ಬಿ ಮುಗಿಸಿದ್ದ. ಸೌಹಾರ್ದ ಪಟೇಲ್ ಅಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದ ವೈದ್ಯರೊಬ್ಬರ ಮಗಳನ್ನು ಪ್ರೀತಿಸುತ್ತಿದ್ದ. ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಅವರು, ಪ್ರೀತಿಸುತ್ತಿದ್ದ ಯುವತಿಯನ್ನು ಸೌಹಾರ್ದ ಪಟೇಲ್‌ನಿಂದ ದೂರ ಮಾಡಿದ್ದರು. ನಂತರ ಖಿನ್ನತೆಗೆ ಒಳಗಾಗಿದ್ದ ಆರೋಪಿ ಸೌಹಾರ್ದ್ ಪಟೇಲ್‌ ಮಾನಸಿಕ ರೋಗ ತಜ್ಞರಾದ ಅರವಿಂದ್, ಕೆ.ಎಸ್.ಪವಿತ್ರ ಬಳಿ ಚಿಕಿತ್ಸೆ ಪಡೆದಿದ್ದ. ‌

ಮಾನಸಿಕ ರೋಗಿಯಾಗಿದ್ದ ಹಿನ್ನೆಲೆ ಸೌಹಾರ್ದ ಪಟೇಲ್‌ ನನ್ನು ತೊರೆದು ಆತನ ತಂದೆ-ತಾಯಿ ಬೇರೆಡೆ ವಾಸಿಸುತ್ತಿದ್ದರು. ಮಾತ್ರೆಗಳ ಮೇಲೆ ಮಾತ್ರೆಗಳನ್ನು ಕೊಟ್ಟು ತನ್ನನ್ನು ರೋಗಿಯನ್ನಾಗಿಸಿದ್ದಾರೆ ಎಂದು ವೈದ್ಯರ ಮೇಲೆ ಸಿಟ್ಟಾಗಿದ್ದ. ಹೀಗಾಗಿ ಮಾತ್ರೆಗಳನ್ನು ಪುಡಿಮಾಡಿ ಸ್ವೀಟ್ ಬಾಕ್ಸ್ ನಲ್ಲಿ ಬೆರೆಸಿ ಸರ್ಜಿ ಹೆಸರಿನಲ್ಲಿ ಅವರಿಗೆ ಕಳುಹಿಸಿ ತಿನ್ನಿಸಲು ಪ್ಲಾನ್ ಮಾಡಿದ್ದ.

 

ಇದೀಗ ಆರೋಪಿ ಸೌಹಾರ್ದ ಪಟೇಲ್ ಕೋಟೆ ಪೊಲೀಸರ ವಶದಲ್ಲಿದ್ದಾನೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

7 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

10 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

13 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

14 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

14 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

15 hours ago