ಬಾಗಲಕೋಟೆ : ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ ಗಾಯಕ, ಕನ್ನಡ ನಾಡಿನ ಕಬೀರ ಎಂದೇ ಕರೆಸಿಕೊಂಡ , ತಮ್ಮ ಪ್ರವಚನ ಮತ್ತು ಸಂವಾದಗಳ ಮೂಲಕ ಹಿಂದೂ-ಮುಸ್ಲೀಮರ ಮಧ್ಯೆ ಭಾವೈಕ್ಯತೆಯನ್ನು ಸಾರುತ್ತಿದ್ದ ಮಹಾಲಿಂಗಪುರದ ಇಬ್ರಾಹಿಂ ಸುತಾರ ಶನಿವಾರ ಬೆಳಿಗ್ಗೆ 6:30ಕ್ಕೆ ನಿಧನರಾಗಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದ ಇಬ್ರಾಹಿಂ ಸುತಾರ್ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ಆದರೆ ಇಂದು ಬೆಳಗ್ಗೆ ಇಬ್ರಾಹಿಂ ಸುತಾರ್ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿತ್ತು. ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದದಾರೂ, 76 ವರ್ಷದ ಇಬ್ರಾಹಿಂ ಸುತಾರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಇಬ್ರಾಹಿಂ ಸುತಾರ್ ಅವರು ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸುತಾರ ಅವರಿಗೆ ನಾಲ್ಕು ವರ್ಷಗಳ ಹಿಂದೆ (2018 ಏಪ್ರಿಲ್ 2) ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…