Featured

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು : ಸಿದ್ದರಾಮಯ್ಯ  – Vishwanews24

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು : ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ..

ರೈತ ಹೋರಾಟಗಾರರಿಗೆ ಅಭಿನಂದನೆಗಳು..

ಬೆಂಗಳೂರು: ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದಿದ್ದಾರೆ.

ಕೃಷಿ‌ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ, ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಬಿಜೆಪಿ‌ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು ಎಂದಿದ್ದಾರೆ.

ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ. ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

42 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

52 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

1 hour ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

1 hour ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago