Featured

ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ – ಕುಯಿಲಾಡಿ -Vishwanews24

ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ – ಕುಯಿಲಾಡಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಭಧ್ರಾ ಮೇಲ್ದಂಡೆ ಯೋಜನೆಗೆ ರೂ.೫,೩೦೦ ಕೋಟಿ ವಿನಿಯೋಗಿಸುವ ಉತ್ತಮ ದೂರದರ್ಶಿತ್ವದ ಯೋಜನೆ ಹಾಕಲಾಗಿದೆ. ಜಗತ್ತಿನೆಲ್ಲೆಡೆ ಆರ್ಥಿಕ ಹಿಂಜರಿತ ಇದ್ದರೂ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೋವಿಡ್ ಸಂದರ್ಭದಲ್ಲಿ ಘೋಷಿಸಿರುವ ಸಣ್ಣ ಉದ್ದಿಮೆದಾರರಿಗೆ ನೀಡುವ ರೂ.೧೦ ಲಕ್ಷ ಸಾಲ ಯೋಜನೆಯಾದ ‘ಕ್ರೆಡಿಟ್ ಗ್ಯಾರಂಟಿ’ಯನ್ನು ಮುಂದುವರಿಸಲಾಗಿದೆ. ಜೊತೆಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಡಿ ಘೋಷಿಸಿರುವ ಬಡವರಿಗೆ ಉಚಿತ ಪಡಿತರ ನೀಡುವ ‘ಶ್ರೀ ಅನ್ನ ಯೋಜನೆ’ಯನ್ನು ಮುಂದುವರಿಸಲಾಗಿದೆ. ೫೦ ಹೊಸ ವಿಮಾನ ನಿಲ್ದಾಣಗಳ ಘೋಷಣೆ ಸಹಿತ ೩೦ ರಾಜ್ಯಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಯೋಜನೆಯ ಮೂಲಕ ಸಣ್ಣ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲಾಗಿದೆ. ಕುಶಲಕರ್ಮಿಗಳಿಗೆ ‘ವಿಶ್ವಕರ್ಮ ಕೌಶಲ್ಯ ಅಭಿವೃದ್ಧಿ’ ಯೋಜನೆ ಜಾರಿಗೊಳಿಸಲಾಗಿದೆ. ಎಲೆಕ್ಟಿçಕ್ ವಾಹನಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಜೊತೆಗೆ ವಾಹನ ಗುಜರಿ ನೀತಿಯಡಿ ಹಳೆ ಸರ್ಕಾರಿ ವಾಹನಗಳನ್ನು ಬದಲಾಯಿಸುವಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ.

ಮಹಿಳಾ ಉದ್ದಿಮೆದಾರರಿಗೆ ‘ಮಹಿಳಾ ಸಮ್ಮಾನ್’ ಯೋಜನೆ ಜಾರಿಗೊಳಿಸಲಾಗಿದೆ. ಮಧ್ಯಮ ವರ್ಗದ ಜನತೆಗೆ ಆದಾಯ ತೆರಿಗೆಯಲ್ಲಿ ಬಹುನಿರೀಕ್ಷಿತ ವಿನಾಯಿತಿ ಘೋಷಿಸಲಾಗಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ; ಕಟ್ಟಕಡೆಯ ಜನತೆಯನ್ನು ತಲುಪುವುದು; ಮೂಲಸೌಕರ್ಯ; ಸಾಮರ್ಥ್ಯದ ಸದ್ಬಳಕೆ; ಪರಿಸರ ಸ್ನೇಹಿ ಅಭಿವೃದ್ಧಿ; ಯುವಶಕ್ತಿಗೆ ಉತ್ತೇಜನ; ಅರ್ಥಿಕ ಸುಧಾರಣೆ, ಈ ಸಪ್ತ ಮಂತ್ರಗಳ ಭದ್ರಬುನಾದಿಯಲ್ಲಿ ಮಂಡಿಸಿರುವ ಕೇಂದ್ರ ಬಜೆಟ್ ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಲಿದೆ.

ದೇಶದ ಆರ್ಥಿಕತೆಯನ್ನು ಸದೃಢಗೊಳಿಸುವ ಜೊತೆಗೆ ದೇಶದ ಮೂಲಭೂತ ಸೌಕರ್ಯಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ಸಾಮಾನ್ಯ ಜನತೆ, ಕೃಷಿಕರು, ಉದ್ಯಮ, ಯುವ ಮತ್ತು ಮಹಿಳಾ ವರ್ಗಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿರುವ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

18 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

19 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

21 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

21 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

22 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

22 hours ago