ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. 26 ವರ್ಷದ ಯುವಕನಾಗಿರುವ ಆರೋಪಿ ಮಾನಸಿಕವಾಗಿ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಮುಂಬೈ ಸಂಚಾರ ಪೊಲೀಸರ ವಾಟ್ಸಪ್ ಸಹಾಯವಾಣಿಗೆ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಲಾದ ಸಂದೇಶ ಬಂದಿತ್ತು. ಸಲ್ಮಾನ್ ಅವರ ಕಾರನ್ನು ಬಾಂಬ್ ಇಟ್ಟು ಸ್ಫೋಟಿಸಲಾಗುವುದು ಮತ್ತು ಅವರ ಮನೆಗೆ ಪ್ರವೇಶಿಸಿದ ನಂತರ ಅವರ ಮೇಲೆ ದಾಳಿ ಮಾಡಲಾಗುವುದು ಎಂದು ಸಂದೇಶದಲ್ಲಿ ಹೇಳಲಾಗಿತ್ತು.
ಸಲ್ಮಾನ್ ಖಾನ್‌ಗೆ ಈಗಾಗಲೇ ವೈ-ಪ್ಲಸ್ ಭದ್ರತೆ ನೀಡಲಾಗಿದೆ. ಆದರೆ ಈ ಬೆದರಿಕೆಯ ನಂತರ, ಮುಂಬೈನ ವರ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡರು. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(2)(3)ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಬೆದರಿಕೆ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೆ, ಬಾಂದ್ರಾದಲ್ಲಿರುವ ಸಲ್ಮಾನ್ ಮನೆಯ ಹೊರಗೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಪ್ರಕರಣದ ತನಿಖೆ ಆರಂಭಿಸಿದಾಗ ವಡೋದರಾದ ವಾಘೋಡಿಯಾ ತಾಲೂಕಿನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರು ಈ ಬೆದರಿಕೆ ಕರೆಯನ್ನು ಕಳುಹಿಸಿದ್ದಾರೆ ಎಂದು ತಿಳಿದು ಬಂದಿತ್ತು. ಮುಂಬೈ ಪೊಲೀಸರ ತಂಡವು ವಾಘೋಡಿಯಾ ಪೊಲೀಸರೊಂದಿಗೆ ಆ ವ್ಯಕ್ತಿಯ ಮನೆಗೆ ತಲುಪಿದೆ ಎಂದು ವಡೋದರಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಆನಂದ್ ಹೇಳಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಈ 26 ವರ್ಷದ ಯುವಕ ಮಾನಸಿಕವಾಗಿ ಅಸ್ಥಿರನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು, ಆತನನ್ನು ವಿಚಾರಣೆಗಾಗಿ ಮುಂಬೈಗೆ ಬರಲು ನೋಟಿಸ್ ನೀಡಿ, ವಾಪಸ್ ಮರಳಿದ್ದಾರೆ ಎಂದು ರೋಹನ್ ಆನಂದ್ ವಿವರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…