Featured

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ : ಮುಂಬೈ ಪೊಲೀಸ್ – vishwanews24

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ : ಮುಂಬೈ ಪೊಲೀಸ್

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್  ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. 26 ವರ್ಷದ ಯುವಕನಾಗಿರುವ ಆರೋಪಿ ಮಾನಸಿಕವಾಗಿ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮುಂಬೈ ಸಂಚಾರ ಪೊಲೀಸರ ವಾಟ್ಸಪ್ ಸಹಾಯವಾಣಿಗೆ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಲಾದ ಸಂದೇಶ ಬಂದಿತ್ತು. ಸಲ್ಮಾನ್ ಅವರ ಕಾರನ್ನು ಬಾಂಬ್ ಇಟ್ಟು ಸ್ಫೋಟಿಸಲಾಗುವುದು ಮತ್ತು ಅವರ ಮನೆಗೆ ಪ್ರವೇಶಿಸಿದ ನಂತರ ಅವರ ಮೇಲೆ ದಾಳಿ ಮಾಡಲಾಗುವುದು ಎಂದು ಸಂದೇಶದಲ್ಲಿ ಹೇಳಲಾಗಿತ್ತು.

ಸಲ್ಮಾನ್ ಖಾನ್‌ಗೆ ಈಗಾಗಲೇ ವೈ-ಪ್ಲಸ್ ಭದ್ರತೆ ನೀಡಲಾಗಿದೆ. ಆದರೆ ಈ ಬೆದರಿಕೆಯ ನಂತರ, ಮುಂಬೈನ ವರ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡರು. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(2)(3)ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಬೆದರಿಕೆ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೆ, ಬಾಂದ್ರಾದಲ್ಲಿರುವ ಸಲ್ಮಾನ್ ಮನೆಯ ಹೊರಗೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಪ್ರಕರಣದ ತನಿಖೆ ಆರಂಭಿಸಿದಾಗ ವಡೋದರಾದ ವಾಘೋಡಿಯಾ ತಾಲೂಕಿನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರು ಈ ಬೆದರಿಕೆ ಕರೆಯನ್ನು ಕಳುಹಿಸಿದ್ದಾರೆ ಎಂದು ತಿಳಿದು ಬಂದಿತ್ತು. ಮುಂಬೈ ಪೊಲೀಸರ ತಂಡವು ವಾಘೋಡಿಯಾ ಪೊಲೀಸರೊಂದಿಗೆ ಆ ವ್ಯಕ್ತಿಯ ಮನೆಗೆ ತಲುಪಿದೆ ಎಂದು ವಡೋದರಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಆನಂದ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಈ 26 ವರ್ಷದ ಯುವಕ ಮಾನಸಿಕವಾಗಿ ಅಸ್ಥಿರನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು, ಆತನನ್ನು ವಿಚಾರಣೆಗಾಗಿ ಮುಂಬೈಗೆ ಬರಲು ನೋಟಿಸ್ ನೀಡಿ, ವಾಪಸ್ ಮರಳಿದ್ದಾರೆ ಎಂದು ರೋಹನ್ ಆನಂದ್ ವಿವರಿಸಿದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

12 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago