Featured

ಸಲ್ಮಾನ್ ಖಾನ್ ಮತ್ತು ತಂದೆ ಸಲೀಂ ಖಾನ್ ಗೆ ಜೀವ ಬೆದರಿಕೆ ; ಹೆಚ್ಚಿದ ಭದ್ರತೆ- Vishwanews24

ಸಲ್ಮಾನ್ ಖಾನ್ ಮತ್ತು ತಂದೆ ಸಲೀಂ ಖಾನ್ ಗೆ ಜೀವ ಬೆದರಿಕೆ ; ಹೆಚ್ಚಿದ ಭದ್ರತೆ- VIshwanews24

ಮುಂಬೈ: ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ, ಚಿತ್ರಕಥೆಗಾರ ಸಲೀಂ ಖಾನ್ ಅವರಿಗೂ ಅನಾಮಧೇಯ ಜೀವ ಬೆದರಿಕೆ ಪತ್ರ ಬಂದ ಒಂದು ದಿನದ ನಂತರ ಮಹಾರಾಷ್ಟ್ರ ಗೃಹ ಇಲಾಖೆಯು ಅವರ ಭದ್ರತೆಯನ್ನು ಹೆಚ್ಚಿಸಿದೆ.

‘ಮಹಾರಾಷ್ಟ್ರ ಗೃಹ ಇಲಾಖೆಯು ನಟ ಸಲ್ಮಾನ್ ಖಾನ್ ಅವರಿಗೆ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ನಿನ್ನೆ ಜೂನ್ 5ರಂದು ಬೆದರಿಕೆ ಪತ್ರವನ್ನು ಕಳುಹಿಸಿದ ನಂತರ ಅವರ ಭದ್ರತೆಯನ್ನು ಬಲಪಡಿಸಿದೆ’ ಎಂದು ಸುದ್ದಿ ಸಂಸ್ಥೆ ANI ಟ್ವೀಟ್ ಮಾಡಿದೆ. ಅನಾಮಧೇಯ ಪತ್ರ ಬೆಳಕಿಗೆ ಬಂದ ನಂತರ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಸಲ್ಮಾನ್ ಖಾನ್ ಪ್ರತಿದಿನ ವಾಕಿಂಗ್ ಹೋಗುತ್ತಾರೆ. ಈ ನಡುವೆ ಅವರು ವಿಶ್ರಾಂತಿ ಪಡೆಯುತ್ತಿರುವ ಸ್ಥಳದಲ್ಲಿ ಸಲ್ಲು ತಂದೆ ಈ ಪತ್ರವನ್ನು ಸ್ವೀಕರಿಸಿದ್ದಾರೆ. ಈ ನಡುವೆ ಸಲ್ಮಾನ್ ಗೆ ಮತ್ತೆ ಬೆದರಿಕೆ ಪತ್ರ ಬಂದಿದ್ದು ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿತ್ತು. ಈ ಸಂಬಂಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಂಜಾಬ್ ಗಾಯಕ ಸಿಧು ಮುಸೇವಾಲಾ ಸಾವಿನ ಬೆನ್ನಲ್ಲೇ, ಇದೀಗ ಬಾಲಿವುಡ್​ನ ಸಲ್ಮಾನ್ ಖಾನ್​ ಹಾಗೂ ಸಲೀಂ ಖಾನ್ ಗೆ ಜೀವ ಬೆದರಿಕೆ ಪತ್ರವೊಂದು ಬಂದಿದ್ದು ಸದ್ಯ ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬ್ಯಾಂಡ್ ಸ್ಟ್ಯಾಂಡ್ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದ್ದು, ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

 

Vishwa News 24

Recent Posts

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

9 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

17 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

51 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

2 hours ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago