ಮುಂಬೈ: ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರನೇ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಲಾಗಿದೆ. ತನಿಖೆ ನಡೆಸುತ್ತಿರುವ ಮುಂಬೈ ಕ್ರೈಂ ಬ್ರ್ಯಾಂಚ್ ಹರಿಯಾಣದ ಫತೇಹಾಬಾದ್‌ನಿಂದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನಾದ ಆರನೇ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು 37 ವರ್ಷದ ಹರ್ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ.
ʼʼಹರ್ಪಾಲ್ ಸಿಂಗ್‌ನನ್ನು ಆತನ ಊರಾದ ಫತೇಹಾಬಾದ್‌ನಿಂದ ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್‌ನ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ಆಗಮಿಸಿದ ಆತನನ್ನು ವಶಕ್ಕೆ ಪಡೆದುಕೊಂಡಿದೆʼʼ ಎಂದು ಮೂಲಗಳು ತಿಳಿಸಿವೆ. ಹರ್ಪಾಲ್ ಸಿಂಗ್‌ನನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗಿದ್ದು, ನಂತರ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಇದುವರೆಗೆ 6 ಮಂದಿಯನ್ನು ಬಂಧಿಸಿದಂತಾಗಿದೆ.
ಈ ಹಿಂದೆ ಆರಂಭದಲ್ಲಿ ಪೊಲೀಸರು ಪಂಜಾಬ್ ಮೂಲದ ಇಬ್ಬರನ್ನು ಬಂಧಿಸಿದ್ದರು. ಬಳಿಕ ಗುಜರಾತ್‌ನಿಂದ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ರಾಜಸ್ಥಾನದ ಓರ್ವ ಬಲೆಗೆ ಬಿದ್ದಿದ್ದ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…