Featured

ಸಲ್ಮಾನ್​ ಮನೆ ಎದುರು ಗುಂಡಿನ ದಾಳಿ ಪ್ರಕರಣ: ತನಿಖೆಗೆಎನ್​ಕೌಂಟರ್ ಸ್ಪೆಷಲಿಸ್ಟ್​ ದಯಾನಾಯಕ್ ಎಂಟ್ರಿ – Vishwanews24

ಸಲ್ಮಾನ್​ ಮನೆ ಎದುರು ಗುಂಡಿನ ದಾಳಿ ಪ್ರಕರಣ: ತನಿಖೆಗೆಎನ್​ಕೌಂಟರ್ ಸ್ಪೆಷಲಿಸ್ಟ್​ ದಯಾನಾಯಕ್ ಎಂಟ್ರಿ

ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್  ಎಂಟ್ರಿ ಪಡೆದಿದ್ದಾರೆ. ಈಗಾಗಲೇ ಬಂಧನವಾಗಿರುವ ಇಬ್ಬರು ಆರೋಪಿಗಳು ಬಳಸಲಾದ ಗನ್ ಗಳನ್ನು ತಾಪಿ ನದಿಯಲ್ಲಿ ಎಸೆದಿರೋದಾಗ ಹೇಳಿಕೊಂಡಿದ್ದಾರೆ. ಹಾಗಾಗಿ ದಯಾ ನಾಯಕ್ ಸೂರತ್ ಗೆ ಬಂದಿಳಿದಿದ್ದಾರೆ.

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ  ನಡೆದು, ಆತಂಕ ಸೃಷ್ಟಿಯಾಗಿತ್ತು. ಆನಂತರ ಗುಂಡಿನ ದಾಳಿ ಮಾಡಿದವರನ್ನು ಹೆಡೆಮೂರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ ಮುಂಬೈ ಪೊಲೀಸರು. ಗುಂಡಿನ ದಾಳಿಯ ನಂತರ ಸಲ್ಮಾನ್ ಆಚೆ ಬಂದಿರಲೇ ಇಲ್ಲ. ಇದೀಗ ಸಲ್ಮಾನ್ ದುಬೈಗೆ ಹಾರಿದ್ದಾರೆ. ವೈ ಪ್ಲಸ್ ಭದ್ರತೆಯೊಂದಿಗೆ ಆಗಮಿಸಿದ್ದ ಅವರು, ಬಿಗಿ ಭದ್ರತೆ ನಡುವೆಯೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ನಡುವೆ ಮುಂಬೈ ಪೊಲೀಸರಿಂದ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್  ಮನೆಯಿಂದ ಕ್ಯಾಬ್ ಬುಕ್ ಮಾಡಿದ್ದಕ್ಕಾಗಿ ಯುವಕನನ್ನು ಬಂಧಿಸಲಾಗಿದೆ.

ಆರೋಪಿ ಉತ್ತರ ಪ್ರದೇಶದ ಗಾಜಿಯಾಬಾದ್‌ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕ್ಯಾಬ್ ಡ್ರೈವರ್ ಸಲ್ಮಾನ್ ಖಾನ್ ಅವರ ಮನೆಯಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಬಂದು ಬುಕ್ಕಿಂಗ್ ಬಗ್ಗೆ ಅಲ್ಲಿನ ವಾಚ್‌ಮನ್‌ ಬಳಿ ಕೇಳಿದ್ದಾರೆ. ಮೊದಲು ದಿಗ್ಭ್ರಮೆಗೊಂಡ ವಾಚ್‌ಮನ್, ತಕ್ಷಣ ಬುಕಿಂಗ್ ಬಗ್ಗೆ ಹತ್ತಿರದ ಬಾಂದ್ರಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ಮುಂಬೈನ ಬಾಂದ್ರಾ ಪೊಲೀಸರು, ಕ್ಯಾಬ್ ಚಾಲಕನನ್ನು ವಿಚಾರಣೆಗೆ ಒಳಪಡಿಸಿದರು. ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ ವ್ಯಕ್ತಿಯ ಮಾಹಿತಿಯನ್ನು ಟ್ರ್ಯಾಕ್ ಮಾಡಿದ್ದಾರೆ. ಕ್ಯಾಬ್ ಬುಕ್ ಮಾಡಿದ ವ್ಯಕ್ತಿ ಘಾಜಿಯಾಬಾದ್‌ನ 20 ವರ್ಷದ ವಿದ್ಯಾರ್ಥಿಯಾಗಿದ್ದು, ರೋಹಿತ್ ತ್ಯಾಗಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿರುವುದು ಚೇಷ್ಟೆಗಾಗಿ ಎಂದು ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬಂಧಿಸಿದರು. ನಂತರ ಅವರನ್ನು ಮುಂಬೈಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಎರಡು ದಿನಗಳ ಕಾಲ ಬಾಂದ್ರಾ ಪೊಲೀಸರ ಕಸ್ಟಡಿಗೆ ಒಪ್ಪಿಸಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago