ಬೆಳಗಾವಿ : ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸಾವನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಮೃತಪಟ್ಟವರೆಲ್ಲರೂ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದವರಾಗಿದ್ದು, ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಇದ್ದಾರೆ. ಹಣಮವ್ವ ಮೇಗಾಡಿ (25), ಮಾರುತಿ (42), ಇಂದ್ರವ್ವ (24), ದೀಪಾ (31), ಸವಿತಾ (17), ಸುಪ್ರಿತಾ (11) ಮೃತಪಟ್ಟವರು.
ಗಾಯಾಳುಗಳನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ನಸುಕಿನ ಜಾವ ಎಲ್ಲರೂ ಗೂಡ್ಸ್ ವಾಹನ ಬಾಡಿಗೆ ಮಾಡಿಕೊಂಡು ಯಲ್ಲಮ್ಮನ ಗುಡ್ಡಕ್ಕೆ ರೇಣುಕಾದೇವಿ ಜಾತ್ರೆಗೆ ತೆರಳುತ್ತಿದ್ದರು. ಗ್ರಾಮದಿಂದ ಹೊರಟ ವಾಹನವು ರಾಮದುರ್ಗ ಮಾರ್ಗವಾಸಾಗಿ, ಚುಂಚನೂರು ಗ್ರಾಮದ ಸರಹದ್ದಿಗೆ ಬಂದಿತ್ತು. ವೇಗವಾಗಿ ಚಲಿಸುತ್ತಿದ್ದ ವಾಃನ ಚುಂಚನೂರು ವಿಠಲಪ್ಪನ ದೇವಸ್ಥಾನದ ಮುದಿನ ಬೃಹತ್ ಆಲದ ಮರಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿತು. ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಐವರು ಸ್ಥಳದಲ್ಲೇ ಮೃತಪಟ್ಟರು. ಒಬ್ಬ ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…