Featured

ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್ -Vishwanews24

ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್ -Vishwanews24

ನವದೆಹಲಿ: ಹೆಣ್ಣು ಮಕ್ಕಳು ಸಶಸ್ತ್ರಪಡೆಗಳನ್ನು ಸೇರಲು ಸೈನಿಕ ಶಾಲೆಗಳು ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಸೈನಿಕ ಶಾಲೆಗಳ ವೆಬಿನಾರ್ ನಲ್ಲಿ ಭಾಗವಹಿಸಿದ್ದ ಸಿಂಗ್ ಅವರು, ಹೆಣ್ಣು ಮಕ್ಕಳಿಗೆ ಸಶಸ್ತ್ರಪಡೆಗಳಲ್ಲಿ ಹೆಚ್ಚಿನ ಅವಕಾಶ ನೀಡಲು 100 ಸೈನಿಕ ಶಾಲೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಘೋಷಿಸಿದರು. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಿಳೆಯರ ಹಾದಿಯನ್ನು ಸುಗಮಗೊಳಿಸಲು ಸೈನಿಕ ಶಾಲೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

‘ಸೈನಿಕ’ ಏಕತೆ, ಶಿಸ್ತು ಮತ್ತು ಭಕ್ತಿಯನ್ನು ಸೂಚಿಸಿದರೆ, ‘ಶಾಲೆ’ ಶಿಕ್ಷಣದ ಕೇಂದ್ರವಾಗಿದೆ. ಆದ್ದರಿಂದ ಸೈನಿಕ ಶಾಲೆಗಳು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರವು ದೇಶಕ್ಕೆ ಸೇವೆ ಸಲ್ಲಿಸುವ ತಮ್ಮ ಕನಸುಗಳನ್ನು ನನಸಾಗಿಸಲು ಮಹಿಳೆಯರನ್ನು ಉತ್ತೇಜಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಕ್ಕಳ ಮೂಲಭೂತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮತ್ತು ದೇಶದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಳೆದ ಆರು-ಏಳು ವರ್ಷಗಳಲ್ಲಿ ಸರ್ಕಾರವು ತೆಗೆದುಕೊಂಡ ಅನೇಕ ಪ್ರಮುಖ ನಿರ್ಧಾರಗಳಲ್ಲಿ ಸೈನಿಕ ಶಾಲೆಗಳ ವಿಸ್ತರಣೆಯ ಘೋಷಣೆಯು ಒಂದು. ಸೈನಿಕ ಶಾಲೆಗಳಲ್ಲಿ ರಕ್ಷೆ ಮತ್ತು ಶಿಕ್ಷೆಗಳ ವಿಲೀನವು ಮುಂದಿನ ದಿನಗಳಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಶಿಸಿದರು.

 

Vishwa News 24

Recent Posts

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

5 minutes ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

35 minutes ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

45 minutes ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

1 hour ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

1 hour ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

2 hours ago