Featured

ಸಸಿಹಿತ್ಲು : ನಾಪತ್ತೆಯಾಗಿದ್ದ ಯುವಕನ ಮೃತದೇಹ ಸಸಿಹಿತ್ಲು ಬೀಚ್ ನಲ್ಲಿ ಪತ್ತೆ -Vishwanews24

ಸಸಿಹಿತ್ಲು : ನಾಪತ್ತೆಯಾಗಿದ್ದ ಯುವಕನ ಮೃತದೇಹ ಸಸಿಹಿತ್ಲು ಬೀಚ್ ನಲ್ಲಿ ಪತ್ತೆ -Vishwanews24

ಮಂಗಳೂರು, : ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾದ ಘಟನೆ ಸಸಿಹಿತ್ಲು ಮುಂಡ ಬೀಚ್ ನಲ್ಲಿ ನಡೆದಿದೆ. ಮೃತರನ್ನು ಮುಕ್ಕ ನಿವಾಸಿ ಕಿರಣ್ ಶೆಟ್ಟಿ (42) ಎಂದು ಗುರುತಿಸಲಾಗಿದೆ.

ಅವಿವಾಹಿತರಾಗಿದ್ದ ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ ಅಂಗಡಿ ನಡೆಸುತ್ತಿದ್ದರು. ಕೋವಿಡ್ ಕಾರಣದಿಂದ ವ್ಯಾಪಾರ ಇಲ್ಲದೆ ಹಣದ ಸಮಸ್ಯೆಯಿಂದ ಇದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.

ಕಳೆದ ಒಂದು ವಾರದ ಹಿಂದೆ ಇವರು ನಾಪತ್ತೆಯಾಗಿದ್ದು ಜು.20ರ ಮಂಗಳವಾರ ಬೆಳಿಗ್ಗೆ ಹಳೆಯಂಗಡಿ ಪಂಚಾಯತ್ ಸದಸ್ಯರಾದ ಚಂದ್ರಕುಮಾರ್, ಅನಿಲ್, ಧನರಾಜ್ ಮತ್ತಿತರರು ಸೇರಿಕೊಂಡು ಸಮುದ್ರ ಬದಿಯಲ್ಲಿ ತೆರೆ ಅಪ್ಪಳಿಸಿ ತೇಲುತ್ತಿದ್ದ ಶವವನ್ನು ಮೇಲೆತ್ತುವಲ್ಲಿ ಸಹಕರಿಸಿದ್ದಾರೆ.

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

 

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 hour ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago