ಮಂಗಳೂರು, : ನಗರದ ಹೊರವಲಯ ಸಸಿಹಿತ್ಲು ಸಮೀಪ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಬಂದಿದ್ದ ಏಳು ಮಂದಿಯ ತಂಡದ ನಾಲ್ವರು ಯುವಕರು ಸಮುದ್ರಕ್ಕಿಳಿದಿದ್ದು, ಇಬ್ಬರು ಅಲೆಗೆ ಸಿಲುಕಿ ನಾಪತ್ತೆಯಾದ ಘಟನೆ ರವಿವಾರ ಸಂಜೆ ನಡೆದಿದೆ.
ಬಜ್ಪೆ ಸಿದ್ಧಾರ್ಥ ನಗರ ನಿವಾಸಿ ಸುಜಿತ್, ಕಾವೂರು ನಿವಾಸಿ ಗುರುಪ್ರಸಾದ್ ಸಮುದ್ರದಲ್ಲಿ ನಾಪತ್ತೆಯಾದವರು ಎಂದು ಗುರುತಿಸಲಾಗಿದೆ.
ಬಜ್ಪೆ ಮೂಲದ ಸೃಜನ್, ಕಾರ್ತಿಕ್ ಅವರನ್ನು ಸ್ಥಳೀಯ ಗಂಗಾಧರ ಪುತ್ರನ್ ಹಾಗೂ ತಂಡದ ಸದಸ್ಯರು ರಕ್ಷಣೆ ಮಾಡಿದ್ದಾರೆ. ಇವರಲ್ಲಿ ಸೃಜನ್ ತೀವ್ರ ಅಸ್ವಸ್ಥನಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬಜ್ಪೆ ಯುವ ಟೈಗರ್ ತಂಡದ ಸ್ಪರ್ಧಾಳುಗಳಾದ ಯುವಕರು, ಸ್ಪರ್ಧೆಯ ಮೊದಲನೇ ಸುತ್ತಿನಲ್ಲಿಯೇ ಪರಾಜಯಗೊಂಡಿದ್ದರಿಂದ ನಾಲ್ವರು ಸದಸ್ಯರು ಅಗ್ಗಿದಕಳಿಯ ಸಮುದ್ರದ ಬಳಿ ಬಂದು ಈಜಾಡಲು ಮುಂದಾಗಿದ್ದರು.
ಯುವಕರನ್ನು ಸ್ಥಳೀಯರು ಹಲವು ಬಾರಿ ಎಚ್ಚರಿಸಿದ್ದಾರೆ. ಸ್ಥಳೀಯರ ಮಾತನ್ನು ಲೆಕ್ಕಿಸದೇ ಏಕಾಏಕಿ ನಾಲ್ವರು ಸಮುದ್ರದ ಅಲೆಯಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೇ ಸ್ಥಳೀಯ ಗಂಗಾಧರ ಪುತ್ರನ್ ಸಾಹಸ ಮೆರೆದು ಇಬ್ಬರನ್ನು ರಕ್ಷಿಸಲು ಯಶಸ್ವಿಯಾದರು. ಆದರೆ, ಇನ್ನಿಬ್ಬರು ಯುವಕರು ಕಡಲಿನ ಅಬ್ಬರದೊಂದಿಗೆ ಸೆಳೆತಕ್ಕೊಳಗಾದರು.
ಸಮುದ್ರದಿಂದ ಸ್ವಲ್ಪ ದೂರದಲ್ಲಿ, ಬಾಕಿಮಾರು ಗದ್ದೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸಂಯೋಜಕರು ಆಗಾಗ ಧ್ವನಿವರ್ಧಕದಲ್ಲಿ ‘ಸಮುದ್ರದತ್ತ ಹೋಗಬೇಡಿ’ ಎಂದು ಎಚ್ಚರಿಸುತ್ತಿದ್ದರು. ಸ್ಥಳೀಯ ಮೀನುಗಾರ ಮಹಿಳೆಯರು ಸಹ ಈ ತಂಡಕ್ಕೆ ಎಚ್ಚರಿಕೆಯನ್ನು ನೀಡಿದ್ದರು ಎನ್ನಲಾಗಿದೆ. ಘಟನೆ ವೇಳೆ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನಸಂದಣಿ ಕೂಡಿತ್ತು.
ಈ ಕುರಿತು ಸುರತ್ಕಲ್ ಪೊಲೀಸರು ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…