Featured

ಸಹಕಾರಿಗಳಿಗೆ ಗೌರವ ಕೊಡಿ : ಸಚಿವ ಎಸ್.ಟಿ.ಸೋಮಶೇಖರ್- vishwanews24

ಬೆಂಗಳೂರು: ಸಹಕಾರ ಸಂಘಗಳಿಗೂ ರೈತರಿಗೂ ನೇರ ಸಂ ಬಂಧವಿದೆ. ಹೀಗಾಗಿ ಇಲ್ಲಿ ಕೆಲಸ ಮಾಡುವವರು ನೇರವಾಗಿ ಅನ್ನದಾತರಿಗೆ ಸಂಬಂಧಿಸಿದ, ಅವರಿಗೆ ಅನುಕೂಲವನ್ನು ಮಾಡಿಕೊಡುವ ಜವಾಬ್ದಾರಿಯುತ ಸ್ಥಾನದಲ್ಲಿರುತ್ತಾರೆ. ಹೀಗಾಗಿ ಇಲ್ಲಿ ಸಮಯ ಪರಿಪಾಲನೆ, ಶಿಸ್ತು, ಪಾರದರ್ಶಕತೆ ಬಹಳ ಮುಖ್ಯವಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪರೀಕ್ಷಾರ್ಥ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಕಿವಿಮಾತು ಹೇಳಿದರು.

ವಿಕಾಸಸೌಧದಲ್ಲಿ ಪರೀಕ್ಷಾರ್ಥ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಡಳಿತಾತ್ಮಕ ವಿಷಯಗಳ ಕುರಿತುಏರ್ಪಡಿಸಲಾಗಿದ್ದ ಕಾರ್ಯಾಗಾರ ಸಭೆಯಲ್ಲಿ ಮಾತನಾಡಿದ ಸಚಿವರು, ಇಲ್ಲಿ ಈಗ ನೂತನವಾಗಿ ಸೇರ್ಪಡೆಯಾಗಿಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಇನ್ನೂ 30 ವರ್ಷಗಳ ಕಾಲ ಇಲ್ಲಿಯೇ ಕಾರ್ಯ ನಿರ್ವಹಣೆ ಮಾಡಬೇಕಿದೆ. ಹೀಗಾಗಿಸಹಕಾರ ಕ್ಷೇತ್ರ ಮತ್ತು ಇಲಾಖೆಗಳಲ್ಲಿ ಆರಂಭದ 2 ವರ್ಷಗಳಲ್ಲಿ ಕಲಿಯುವ ಕೆಲಸದ ಮೇಲೆ ಮುಂದಿನ ಯಶಸ್ಸು ನಿಂತಿರುತ್ತದೆಎಂದು ಸಚಿವರಾದ ಸೋಮಶೇಖರ್ ಅವರು ಹೇಳಿದರು.

ಸಹಕಾರಿಗಳಿಗೆ ಗೌರವ ಕೊಡಿ : ಎಸ್ ಟಿ ಎಸ್

ಇಲ್ಲಿ ಪ್ರಮುಖವಾಗಿ ಸಹಕಾರಿಗಳಿಗೆ ಗೌರವವನ್ನು ಕೊಡಬೇಕು. 45 ಸಾವಿರ ಸಹಕಾರ ಸಂಘಗಳು ಇದ್ದು, ಬಹುತೇಕ ಸಂಘಗಳುರೈತರಿಗೆ ಸಂಬಂಧಪಟ್ಟ ಸಹಕಾರಿ ಸಂಘಗಳೇ ಆಗಿವೆ. ಹೀಗಾಗಿ ಇಲ್ಲಿ ಕಾರ್ಯ ನಿರ್ವಹಣೆ ಮಾಡುವವರು ಸೇವಾ ಮನೋಭಾವವನ್ನು ಉಳ್ಳವರಾಗಿರಬೇಕು. ಇಂದಿನ ಕೆಲಸವನ್ನು ಇಂದೇ ಮಾಡಿ ಮುಗಿಸಬೇಕು . ಆಗ ಹೆಚ್ಚಿನ ಹೊರೆ ಯಾರಮೇಲೂ ಬೀಳದು ಎಂದನಿಮ್ಮ ಕುಟುಂಬದವರಿಗೂ ಸಮಯವನ್ನು ಮೀಸಲಿಡಬೇಕು. ಮತ್ತು ಅವರ, ನಿಮ್ಮ ಆರೋಗ್ಯದ ಕಡೆಯೂಗಮನಹರಿಸಿಕೊಳ್ಳಬೇಕು. 100 ವರ್ಷಗಳ ಇತಿಹಾಸ ಇರುವ ಸಹಕಾರಿ ಕ್ಷೇತ್ರಕ್ಕೆ ಇಂದು ಹೊಸದಾಗಿ ಸೇರ್ಪಡೆಗೊಂಡಿರುವಯುವ ಸಮೂ ಹ ನೀವಾಗಿದ್ದೀ ರಿ. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ದಕ್ಷ ಸೇವೆಯನ್ನು ನೀಡಿ. ನಿಮ್ಮಅತ್ಯುತ್ತಮ ಸೇವೆಯು ಸಹಕಾರಿ ಇಲಾಖೆಗೆ ಮುಂದಿನ ದಾರಿದೀಪವಾಗಲಿ ಎಂದು ಆಶಿಸು ತ್ತೇ ನೆ ಎಂಬುದಾಗಿ ಸಹಕಾರಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮಾಜಿ ಸಹಕಾರ ಸಚಿವರಾದ ಜಿ.ಟಿ.ದೇವೇಗೌಡ ರವರು, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ತುಷಾರ್ಗಿರಿನಾಥ್ ರವರು, ಸಹಕಾರ ಇಲಾಖೆಯ ನಿಬಂಧಕರಾದ ಜಿಯಾವುಲ್ಲ ರವರು, ಅಪೆಕ್ಸ್ ಬ್ಯಾಂ ಕ್ ಮ್ಯಾನೇಜಿಂಗ್ ಡೈರೆಕ್ಟ ರ್ದೇವರಾಜ್ ರವರ, ಕೆಎಂಎಫ್ ಮ್ಯಾನೇಜಿಂಗ್ ಡೈರೆಕ್ಟರ್ ಸತೀಶ್ ರವರು, ಇಲಾಖೆ ಹಿರಿಯ ಅಧಿಕಾರಿಗಳಾ ದ ದಿವಾಕರ್,ವೆಂಕಟಸ್ವಾಮಿ, ಗೋಪಾ ಲಕೃಷ್ಣ ರವರು, ಆಪ್ತ ಕಾರ್ಯದರ್ಶಿಗಳಾ ದ ಶ್ರೀ ನಿವಾಸ ಗೌಡ ರವರು , ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳಾದ ದಿನೇಶ್ ಗೂಳಿಗೌಡ ರವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇನ್ನು, 32 ಮಂದಿ ಕರ್ನಾಟಕ ಕೋಆಪರೇಟಿವ್ ಸರ್ವಿಸ್ ನ ಅಸಿಸ್ಟೆಂಡ್ ರಿಜಿಸ್ಟ್ರಾರ್ ಆಗಿ ಒಂದು ವರ್ಷ ಪ್ರೊಬೇಷನರಿಹಂತವನ್ನು ಪೂರೈಸಿದ್ದಾರೆ. ಇವರಿಗೆ ಸಹಕಾರ ಇಲಾಖೆಯ ಸಂಪೂರ್ಣ ಪರಿಚಯವನ್ನು ಮಾಡಿಕೊಡಲಾಗುವುದು. ಜೊತೆಗೆ 5ಮಂದಿ ಅಡಿಶನಲ್ ರಿಜಿಸ್ಟ್ರಾರ್ ಗಳು ಇದ್ದಾರೆ. ಇವೆರಲ್ಲರೂ ಇನ್ನೂ ಹಲವಾರು ವರ್ಷಗಳ ಕಾಲ ಸಹಕಾರ ಇಲಾಖೆಯಲ್ಲಿಕಾರ್ಯನಿರ್ವಹಣೆಯನ್ನು ಮಾಡುವುದರಿಂದ ಅವರು ಇಲ್ಲಿ ಕೆಲಸವನ್ನು ಮಾಡಬೇಕಾಗುತ್ತದೆ. ಹೀಗಾಗಿ ಇಲಾಖೆಯ ಒಟ್ಟಾರೆ ಮಾಹಿತಿ, ಕಾರ್ಯನಿರ್ವಹಣೆ ವಿಧಾನ ಇತ್ಯಾದಿ ವಿಷಯಗಳ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾರ್ಗದರ್ಶನ ಕೊಡಿಸುವ ಕೆಲಸಆಗುತ್ತಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.ಒಂದು ವರ್ಷ ಕೋವಿಡ್ ಅವಧಿಯಲ್ಲಿ ಬಹಳ ಅತ್ಯುತ್ತಮವಾಗಿ ದಕ್ಷತೆಯಿಂದ ಕಾರ್ಯನಿರ್ವಹಣೆ ಮಾಡಿದ್ದು, ಮುಖ್ಯಮಂತ್ರಿಗಳು ಸಹ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಇದಲ್ಲದೆ, ಇವರೆಲ್ಲರಿಗೂ ಇಲಾಖೆಯಿಂದ ಒಂದು ಸನ್ಮಾನವನ್ನುಹಮ್ಮಿಕೊಳ್ಳುವ ಉದ್ದೇ ಶವೂ ನಮ್ಮದಾಗಿತ್ತು. ನಾಳೆಯಿಂದ ಇವರೆಲ್ಲ ಸಹಾಯಕ ನಿಬಂಧಕರಾಗಿ ಸ್ವತಂತ್ರವಾಗಿಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಅವರು ಯಾವ ರೀತಿಯಾಗಿ ಕಾರ್ಯನಿರ್ವಹಣೆ ಮಾಡಬೇಕು?ಎಂಬಿತ್ಯಾದಿಗಳ ಬಗ್ಗೆ ಇಲ್ಲಿ ಅವರಿಗೆ ಕಾರ್ಯಾಗಾರಲ್ಲಿ ಮಾಹಿತಿಯನ್ನು ನೀಡಲಾಗುವುದು ಎಂದು ಸಚಿವರು ತಿಳಿಸಿದರು

ನಮಗೆ ಇಬ್ಬರೇ ಕ್ಯಾಪ್ಟನ್ : ಸಚಿವ ಸೋಮಶೇಖರ್

ನಮಗೆ ಪ್ರತ್ಯೇ ಕವಾಗಿ ಯಾವುದೇ ಕ್ಯಾಪ್ಟನ್ ಗಳಾ ಗಲೀ, ನಾಯಕರಾಗಲೀ ಇಲ್ಲ. ಮುಖ್ಯಮಂತ್ರಿಗಳಾ ಗಿ ಬಿ.ಎಸ್.ಯಡಿಯೂರಪ್ಪಅವರು ಕ್ಯಾಪ್ಟನ್ ಆದರೆ, ಶಾಸಕರಾಗಿ, ಪಕ್ಷದ ಸದಸ್ಯನಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರುಕ್ಯಾಪ್ಟನ್. ಈ ಇಬ್ಬರು ಬಿಟ್ಟರೆ ನಮಗೆ ಬೇರೆ ಯಾವ ಕ್ಯಾಪ್ಟನ್ ಗಳೂ ರಾಜ್ಯದಲ್ಲಿ ಇಲ್ಲ ಎಂದು ಸಚಿವರಾದ ಸೋಮಶೇಖರ್ ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

10 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

11 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

11 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

11 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

12 hours ago