ರಾಷ್ಟ್ರೀಯವಾದಿ ಚಿಂತನೆಯೊoದಿಗೆ ಹಿಂದೂತ್ವದ ವಿಚಾರದಲ್ಲಿ ಗಟ್ಟಿ ಧ್ವನಿಯಾಗಿ ಸಹಕಾರ, ಮೀನುಗಾರಿಕೆ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ತಮ್ಮ ದಿಟ್ಟ ನಿರ್ಧಾರ, ನಾಯಕತ್ವ ಗುಣಗಳಿಂದ ಬೆಳದು ಬಂದ ಯಶ್‌ಪಾಲ್ ಸುವರ್ಣರವರನ್ನು ಅರಸಿ ಬಂದ ಈ ಬಾರಿಯ ಸಹಕಾರ ರತ್ನ ಪ್ರಶಸ್ತಿ ಅವರ ಸಾಧನೆಗೆ ಸಂದ ಗೌರವವಾಗಿದ್ದು, ಮುಂದಿನ ದಿನದಲ್ಲಿ ಓರ್ವ ಜನಪ್ರತಿನಿಧಿಯಾಗಿ ಜನಸಾಮಾನ್ಯರ ಸೇವೆಗೆ ಅವಕಾಶ ಒದಗಿ ಬರಲಿ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.
ಸಹಕಾರ ರತ್ನ ಯಶ್‌ಪಾಲ್ ಸುವರ್ಣ ಅಭಿನಂದನಾ ಸಮಿತಿ ಹಿರಿಯಡ್ಕ ವತಿಯಿಂದ ಆಯೋಜಿಸಿದ್ದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್‌ಪಾಲ್ ಸುವರ್ಣ ರವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ಸಹಕಾರ ಕ್ಷೇತ್ರದ ಸಾಧನೆಗೆ ಅರ್ಹವಾಗಿಯೇ ಸಹಕಾರ ರತ್ನ ಗೌರವಕ್ಕೆ ಯಶ್‌ಪಾಲ್ ಸುವರ್ಣ ಭಾಜನರಾಗಿದ್ದಾರೆ, ಮುಂದಿನ ದಿನಗಳಲ್ಲಿ ರಾಜಕೀಯವಾಗಿಯೂ ಉನ್ನತ ಸ್ಥಾನಮಾನ ಒಲಿದು ಬರಲಿ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ್ ನಾಯಕ್ ಕುಯಿಲಾಡಿ ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ಯಶ್‌ಪಾಲ್ ಸುವರ್ಣ ಸಾಧನೆ ಸರ್ವರಿಗೂ ಸ್ಪೂರ್ತಿಯಾಗಿದ್ದು, ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲೂ ಬಿಜೆಪಿ ಪಕ್ಷವನ್ನು ಸಂಘಟಿಸುವ ನೇತೃತ್ವ ಯಶ್‌ಪಾಲ್ ಸುವರ್ಣ ವಹಿಸಲಿ ಎಂದರು.
ಅಭಿನoದನೆ ಸ್ವೀಕರಿಸಿದ ಯಶ್‌ಪಾಲ್ ಸುವರ್ಣ ಮಾತನಾಡಿ ಸಹಕಾರ ರತ್ನ ಪ್ರಶಸ್ತಿ ನನ್ನ ವೈಯುಕ್ತಿಕ ಸಾಧನೆಗಿಂತ ನನ್ನ ಅಧ್ಯಕ್ಷತೆಯ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮಿ ಬ್ಯಾಂಕಿನ ಆಡಳಿತ ಮಂಡಳಿ, ಸದಸ್ಯರು, ಗ್ರಾಹಕರು, ಮಾರ್ಗದರ್ಶಕರು ಹಾಗೂ ಸಿಬ್ಬಂದಿಗಳ ಸಹಕಾರ ಸಂದ ಗೌರವವಾಗಿದೆ. ಈ ಸನ್ಮಾನ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆ ನೀಡಿದೆ ಎಂದರು.
ಸಮಾರಂಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಹಿರಿಯಡ್ಕ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಅಮರನಾಥ ಶೆಟ್ಟಿ, ಹೆಬ್ರಿ ಕೋಮಲ್ ಫೀಡ್ಸ್ನ ಆಡಳಿತ ನಿರ್ದೇಶಕರಾದ ಸಿದ್ಧಿ ಪ್ರಸಾದ್ ಎಂ. ಶೆಣೈ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀ ದುರ್ಗಾಪರಮೇಶ್ವರಿ ಮರಾಠಿ ಕಲಾ ಸಂಘ, ರಾಜರಾಜೇಶ್ವರಿ ಕ್ರಿಕೆಟರ್ಸ್ ಅಂಜಾರ್, ಹಿಂದೂ ಯುವಸೇನೆ ಹಿರಿಯಡ್ಕ ಮತ್ತು ಭೈರಂಪಳ್ಳಿ ಶಾಖೆ, ಕೋಮಲ್ ಫೀಡ್ಸ್ ವತಿಯಿಂದ ಯಶ್‌ಪಾಲ್ ಸುವರ್ಣರವರನ್ನು ಸನ್ಮಾನಿಸಿ ಅಭಿನಂದಿಸಿದರು.
ಅಭಿನoದನಾ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಸಮಿತಿಯ ಸಂಚಾಲಕರಾದ ಶೇಖರ್ ಶೆಟ್ಟಿ ಹಿರಿಯಡ್ಕ, ಶುಭಕರ ಶೆಟ್ಟಿ ಕಬಿಯಾಡಿ, ಸಂದೀಪ್ ಶೆಟ್ಟಿ ಬಡಗಬೆಟ್ಟು, ರೋಹಿತ್ ಶೆಟ್ಟಿ ಬೆಳ್ಳರ್ಪಾಡಿ, ಪ್ರದೀಪ್ ಶೆಟ್ಟಿ ಭೈರಂಪಳ್ಳಿ, ಸನತ್ ಶೆಟ್ಟಿ ಹಿರಿಯಡ್ಕ, ಅಶೋಕ್ ಶೆಟ್ಟಿ, ನಿತಿನ್ ಶೆಟ್ಟಿ, ವಿನಯ್ ಪೂಜಾರಿ, ಪ್ರಶಾಂತ್ ನಾಯ್ಕ್ ಅಂಜಾರು ಉಪಸ್ಥಿತರಿದ್ದರು, ಸತೀಶ್ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…