Featured

ಸಹಜ ಸ್ಥಿತಿಗೆ ಮಂಗಳೂರು :Vishwanews24

ಮಂಗಳೂರು : ಪೌರತ್ವ ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದ ಕಾರಣ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಮಂಗಳೂರಿನ ಸ್ಥಿತಿ ಈಗ ನಿಯಂತ್ರಣಕ್ಕೆ ಬರುತ್ತಿದ್ದು, ಅಹಿತಕರ ಘಟನೆಗಳು ಸಂಭವಿಸದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪ್ರಮುಖ ರಸ್ತೆಗಳಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಅಂಗಡಿಗಳು ತೆರೆದಿದ್ದು, ವಾಹಸ ಸಂಚಾರ ಪ್ರಾರಂಭಗೊಂಡಿದೆ. ಹೋಟೆಲ್ ಗಳತ್ತ ಜನರ ದಂಡು ಸಾಗುತ್ತಿರುವುದು ಕಂಡುಬಂದಿದ್ದು, ಸರ್ಕಾರಿ, ಖಾಸಗಿ ಬಸ್ಸುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ರವಿವಾರ ಮಧ್ಯರಾತ್ರಿಯವರೆಗೆ ಕಮಿಷನರೇಟ್ ಪ್ರದೇಶದ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಪಡೆಯನ್ನು ಆಯೋಜಿಸಲಾಗಿದೆ. ಸಂಚಾರ ವ್ಯವಸ್ಥೆಗೆ ನಿರ್ಬಂಧ ಹೇರಲಾಗಿದ್ದು, ಅಲ್ಲಲ್ಲಿ ಬ್ಯಾರಿಕೇಡ್ ಅಳವಡಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಆಗಮಿಸಲಿದ್ದು, ಸರ್ಕ್ಯೂಟ್ ಹೌಸ್ ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಕಾನೂನು ಸುವ್ಯವಸ್ಥೆಯ ವಿಚಾರವಾಗಿ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಕೂಡಾ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago