Featured

ಸಹಾಯಕ ಪ್ರೊಫೆಸರ್ ಹುದ್ದೆ ಆಕಾಂಕ್ಷಿಗಳಿಗೆ  ಗುಡ್‌ ನ್ಯೂಸ್‌- ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ – Vishwanews24

ಸಹಾಯಕ ಪ್ರೊಫೆಸರ್ ಹುದ್ದೆ ಆಕಾಂಕ್ಷಿಗಳಿಗೆ  ಗುಡ್‌ ನ್ಯೂಸ್‌ ; ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ – Vishwanews24

ನವದೆಹಲಿ: ಸಹಾಯಕ ಪ್ರೊಫೆಸರ್ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯವಾಗಿದೆ. ಆದರೆ ಈ ಬಾರಿ ಈ ನಿಯಮದಿಂದ ಅನುದಾನ ಆಯೋಗ ಸಡಿಲಿಕೆ ನೀಡಿದೆ. ಕಡ್ಡಾಯವಾಗಿ ಪಿಎಚ್‌ಡಿ ಹೊಂದಿರಲೇಬೇಕು ಎಂದಿರುವ ತನ್ನ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಆಯೋಗ, ಕಡ್ಡಾಯವಾಗಿ ಪಿಎಚ್‌ಡಿ ಹೊಂದುವ ಅಗತ್ಯವಿಲ್ಲ ಎಂದು ಹೇಳಿದೆ.

ಕರೊನಾ ಹಿನ್ನೆಲೆಯಲ್ಲಿ ಈ ವರ್ಷ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳಲು ಪಿಎಚ್‌ಡಿಯನ್ನು ಕನಿಷ್ಠ ಅರ್ಹತೆಯನ್ನಾಗಿ ಮಾಡುವ ಯೋಜನೆಯನ್ನು ಮುಂದುವರಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಈ ಆದೇಶ ಹೊರಡಸಲಾಗಿದೆ ಎಂದಿರುವ ಆಯೋಗ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಎಚ್‌ಡಿ ಕಡ್ಡಾಯ ಎಂಬ ಆದೇಶವನ್ನು ಜುಲೈ 2023ರ ಜುಲೈ 1ರ ಮುಂದೂಡಿದೆ. ಇದರ ಅರ್ಥ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್‌ಡಿ ಕಡ್ಡಾಯವಲ್ಲ ಎಂದ ಈ ಆದೇಶವು 2023ರ ಜುಲೈ1ರವರೆಗೆ ಚಾಲ್ತಿಯಲ್ಲಿ ಇರುತ್ತದೆ.

2018 ರಲ್ಲಿ, ವಿಶ್ವವಿದ್ಯಾಲಯ ಅನುದಾನ ಆಯೋಗ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಪ್ರವೇಶ ಮಟ್ಟದ ಹುದ್ದೆಗಳ ನೇಮಕಾತಿಗಳ ಮಾನದಂಡಗಳನ್ನು ನಿಗದಿ ಮಾಡಿತ್ತು. ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಮೂರು ವರ್ಷಗಳ ಗಡುವು ನೀಡಲಾಗಿತ್ತು. 2021-22ರ ಅವಧಿಗೆ ಇವರಿಗೆ ಬಡ್ತಿ ನೀಡುವ ಸಮಯದಲ್ಲಿ ಇದನ್ನು ಪರಿಗಣಿಸಬೇಕು ಎಂದು ಸೂಚಿಸಲಾಗಿತ್ತು. ಈ ಅವಧಿಯಲ್ಲಿ ಅವರು ಪಿಎಚ್‌ಡಿ ಮುಗಿಸಬೇಕು ಎಂದು ಹೇಳಲಾಗಿತ್ತು. ಅದನ್ನೀಗ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪಾಸಾದ ಸ್ನಾತಕೋತ್ತರ ಪದವೀಧರರು ಈ ಹುದ್ದೆಯಲ್ಲಿ ಸದ್ಯ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

22 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

22 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

23 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

24 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago